ರೈತರ ಬಗ್ಗೆ ಕಾಳಜಿ ಇದ್ದರೆ ಮಾಜಿ ಸಚಿವ ನಾಡಗೌಡ ಅವರು ದೆಹಲಿಗೆ ಹೋಗಿ ಬಿಜೆಪಿ ಸಚಿವರು, ಸಂಸದರ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿ. ಅದನ್ನು ಬಿಟ್ಟು ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ರೈತರು ತೊಂದರೆ ಅನುಭವಿಸುತ್ತಿದ್ದರೆ, ಜೆಡಿಎಸ್‌ನ ಎಂಪಿಗಳು, ಕೇಂದ್ರದ ಮಂತ್ರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಜಿಪಂ ಮಾಜಿ ಸದಸ್ಯ ಬಸವರಾಜ ಹಿರೇಗೌಡರ್, ನಗರ ಬ್ಲಾಕ್ ಕಾಂಗ್ರೆಸ್ ಖಾಜಿ ಮಲಿಕ್ ವಕೀಲ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅನಿಲ್‌ಕುಮಾರ್, ಅಶೋಕ ಉಮಲೂಟಿ, ಪ್ರಭುರಾಜ ಇದ್ದರು.