ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡಲು ಒತ್ತಾಯ

ಮಹಿಳೆಯರಿಗೆ ಶೇ.33ರಷ್ಟು ರಾಜಕೀಯ ಮೀಸಲಾತಿ ಕಲ್ಪಿಸುವ ಸಂವಿಧಾನದ 106ನೇ ತಿದ್ದುಪಡಿಯನ್ನು ಜನಗಣತಿ ಹಾಗೂ ಕ್ಷೇತ್ರ ಪುನರ್ ವಿಂಗಡನೆ ತಕ್ಷಣ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಘಟಕದಿಂದ ರಾಯಚೂರಿನ ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಬುಧವಾರ ಪ್ರತಿಭಟನೆ ಮಾಡಿದರು. ಪ್ರಮುಖರಾದ ಶಕುಂತಲಾ, ಕವಿತಾ, ತುಂಗಾ, ರೇಣುಕಾ, ಶಾಂತಕುಮಾರ, ಎಚ್.ಪದ್ಮಾ, ಬೀಬಿ, ರಜೀಯಾ ಬೇಗಂ, ಪುಷ್ಪವತಿ, ದೇವಮ್ಮ, ಲಕ್ಷ್ಮೀ, ಹುಸೇನಬೀ ಇದ್ದರು.

Published on

ರಾಯಚೂರು

ಮಹಿಳೆಯರಿಗೆ ಶೇ.33ರಷ್ಟು ರಾಜಕೀಯ ಮೀಸಲಾತಿ ಕಲ್ಪಿಸುವ ಸಂವಿಧಾನದ 106ನೇ ತಿದ್ದುಪಡಿಯನ್ನು ಜನಗಣತಿ ಹಾಗೂ ಕ್ಷೇತ್ರ ಪುನರ್ ವಿಂಗಡನೆ ತಕ್ಷಣ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಘಟಕದಿಂದ ನಗರದ ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಬುಧವಾರ ಪ್ರತಿಭಟನೆ ಮಾಡಿದರು.

ಮಹಿಳೆಯರಿಗೆ ಶೇ.33ರಷ್ಟು ರಾಜಕೀಯ ಮೀಸಲಾತಿ ಕಲ್ಪಿಸುವ ಸಂವಿಧಾನದ 106ನೇ ತಿದ್ದುಪಡಿಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಬೇಕಾದರೆ ಜನಗಣತಿ ಹಾಗೂ ಕ್ಷೇತ್ರ ಪುನವಿರ್ ವಿಂಗಡನೆ ಪ್ರಕ್ರಿಯೆ ಪೂರ್ಣಗೊಳ್ಳಬೇಕೆಂಬ ಷರತ್ತುಗಳನ್ನು ವಿಧಿಸಿರುವುದು ಅನಗತ್ಯ ವಿಳಂಬಕ್ಕೆ ಕಾರಣವಾಗಿದೆ. ಆದ್ದರಿಂದ ಆಷರತ್ತುಗಳನ್ನು ತೆಗೆದುಹಾಕಿ ಯಾವುದೇ ವಿಳಂಬವಿಲ್ಲದೆ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಕಳೆದ ಒಂದು ತಿಂಗಳಿನಿಂದ ಕರ್ನಾಟಕದಲ್ಲಿ ರಾಷ್ಟ್ರೀಯ ಮಹಿಳಾ ಮೀಸಲಾತಿ ಒಕ್ಕೂಟವು ರಾಜ್ಯಾದ್ಯಂತ ಜನಾಭಿಪ್ರಾಯ ರೂಪಿಸುವ ಅಭಿಯಾನ ನಡೆಸುತ್ತಿದೆ. ಸಮುದಾಯ ಸಭೆಗಳು, ಸಾರ್ವಜನಿಕ ಸಭೆಗಳು, ರಾಜಕೀಯ ಮುಖಂಡರು, ಗಣ್ಯ ವ್ಯಕ್ತಿಗಳು, ಸಾಹಿತಿಗಳು, ಸಮಾಜಮುಖಿ ಚಿಂತಕರು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರನ್ನು ಭೇಟಿ ಮಾಡಿ ಮಹಿಳಾ ಮೀಸಲಾತಿ ಕಾಯ್ದೆಯನ್ನು ತಕ್ಷಣ ಜಾರಿಗೊಳಿಸುವಂತೆ ಬೆಂಬಲ ಕೋರಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ನಾಗರಿಕರು ಈ ಅಭಿಯಾನಕ್ಕೆ ಬೆಂಬಲ ಸೂಚಿಸಿರುವುದಾಗಿ ತಿಳಿಸಿದರು.

ಈ ಹೋರಾಟವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರಾಜ್ಯದಾದ್ಯಂತ ಸಾರ್ವಜನಿಕ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಸರ್ಕಾರವು ಸಂಸತ್ತಿನ ಪ್ರಸಕ್ತ ಮುಂಗಾರು ಅಧಿವೇಶನದಲ್ಲಿಯೇ ಮಹಿಳಾ ಮೀಸಲಾತಿ ಕಾಯ್ದೆಯನ್ನು ಚರ್ಚಿಸಿ, ಜನಗಣತಿ ಹಾಗೂ ಕ್ಷೇತ್ರ ಪುನವಿರ್ಂಗಡನೆಯ ಷರತ್ತುಗಳನ್ನು ತೆಗೆದುಹಾಕಿ ತಕ್ಷಣ ಜಾರಿಗೊಳಿಸಬೇಕೆಂದು ಒತ್ತಾಯಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net