ಲೆನಿನ್ ಪ್ರತಿಮೆಯನ್ನು ಧ್ವಂಸ ಮಾಡಿದ ಆರೋಪಿಗಳ ಕ್ರಮಕ್ಕೆ ಒತ್ತಾಯ

ಪಶ್ಚಿಮ ಬಂಗಾಳದ ಜಿಯಾಗಂಜ್‌ನಲ್ಲಿ ಕಮ್ಯುನಿಸ್ಟ್ ನಾಯಕ ಲೆನಿನ್ ಪ್ರತಿಮೆಯನ್ನು ಧ್ವಂಸ ಮಾಡಿದ ಬಿಜೆಪಿ ಪ್ರೇರಿತ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಶನಿವಾರ ಸಿಪಿಐ(ಎಂಎಲ್) ಲಿಬರೇಶನ್ ಪಕ್ಷದ ವತಿಯಿಂದ ರಾಯಚೂರಿನ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿದರು. ತಾಲೂಕ ಕಾರ್ಯದರ್ಶಿ ಅಜೀಜ್ ಜಾಗೀರದಾರ್, ಪಕ್ಷದ ಮುಖಂಡರಾದ ಜಿಲಾನಿ ಯರಗೇರಾ, ಭೀಮಯ್ಯ, ನಿಸಾರ್ ಅಹ್ಮದ್, ಹನೀಫ್ ಅಬಕಾರಿ, ಜಗದೀಶ, ಚಾಂದ್‌ಪಾಶ ಇದ್ದರು.

Published on
ರಾಯಚೂರು
ಪಶ್ಚಿಮ ಬಂಗಾಳದ ಜಿಯಾಗಂಜ್‌ನಲ್ಲಿ ಕಮ್ಯುನಿಸ್ಟ್ ನಾಯಕ ಲೆನಿನ್ ಪ್ರತಿಮೆಯನ್ನು ಧ್ವಂಸ ಮಾಡಿದ ಬಿಜೆಪಿ ಪ್ರೇರಿತ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಶನಿವಾರ ಸಿಪಿಐ(ಎಂಎಲ್) ಲಿಬರೇಶನ್ ಪಕ್ಷದ ವತಿಯಿಂದ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿದರು.

ಪಶ್ಚಿಮ ಬಂಗಾಳದ 294 ಸ್ಥಾನಗಳಲ್ಲಿ ಅರ್ಧಕ್ಕಿಂತ ಹೆಚ್ಚು 150 ಸ್ಥಾನಗಳಲ್ಲಿ ಒಟ್ಟು ಮತದಾರರ ಪಟ್ಟಿಯಲ್ಲಿನ ಅಳಿಸುವಿಕೆಗಳು ಗೆಲುವಿನ ಅಂತರಕ್ಕಿಂತ ಹೆಚ್ಚಿವೆ. ಇಂತಹ ಪ್ರದೇಶಗಳಲ್ಲಿ ಬಿಜೆಪಿ 99 ಸ್ಥಾನಗಳನ್ನು ಗೆದ್ದಿದೆ. 2021 ರಲ್ಲಿ ಈ ಪೈಕಿ ಕೇವಲ 19 ಸ್ಥಾನಗಳನ್ನು ಮಾತ್ರ ಬಿಜೆಪಿ ಗೆದ್ದಿತ್ತು. ಪಶ್ಚಿಮ ಬಂಗಾಳದಲ್ಲಿ ಕುತಂತ್ರದಿಂದ ಅಧಿಕಾರ ಹಿಡಿದಿರುವ ಬಿಜೆಪಿ ಚುನಾವಣಾ ಆಯೋಗದ ಕೃಪಾಪೋಷಿತ ಅಕ್ರಮ-ಅಪಾರದರ್ಶಕ ಚುನಾವಣೆಗೆ ಜ್ವಲಂತ ಸಾಕ್ಷಿಯಾಗಿದೆ ಎಂದು ದೂರಿದರು.

ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಜನದ್ರೋಹಿ ರಾಜಕಾರಣದಲ್ಲಿ ತೊಡಗಿವೆ. ಪಶ್ಚಿಮ ಬಂಗಾಳದಲ್ಲಿ ಅಕ್ರಮವಾಗಿ ಅಧಿಕಾರ ಹಿಡಿದಿರುವ ಬಿಜೆಪಿ ಅದನ್ನು ಮರೆಮಾಚಲು ಮತ್ತು ದೇಶದ ಜನರ ಗಮನ ಬೇರೆಡೆ ಸೆಳೆಯಲು ದೊಂಬಿಗಳನ್ನು ಎಬ್ಬಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರಪತಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ದುಷ್ಕೃತ್ಯದಲ್ಲಿ ಭಾಗಿಯಾದವರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಪಶ್ಚಿಮ ಬಂಗಾಳದಲ್ಲಿ ಚುನಾವಣೆಯ ನಂತರ ಹಿಂಸಾಚಾರ ಬುಗಿಲೆದ್ದಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಶಾಂತಿ ಮರುಸ್ಥಾಪಿಸಿ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ತಾಲೂಕ ಕಾರ್ಯದರ್ಶಿ ಅಜೀಜ್ ಜಾಗೀರದಾರ್, ಪಕ್ಷದ ಮುಖಂಡರಾದ ಜಿಲಾನಿ ಯರಗೇರಾ, ಭೀಮಯ್ಯ, ನಿಸಾರ್ ಅಹ್ಮದ್, ಹನೀಫ್ ಅಬಕಾರಿ, ಜಗದೀಶ, ಚಾಂದ್‌ಪಾಶ, ಯಲ್ಲಪ್ಪ, ಮಾರಣ್ಣ, ನರಸಪ್ಪ ಸೇರಿ ಅನೇಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net