_1787928452813.webp?w=480&auto=format%2Ccompress&fit=max)
_1787928452813.webp?w=480&auto=format%2Ccompress&fit=max)
ರಾಯಚೂರು
11ನೇ ವೇತನ ಆಯೋಗದ ಶಿಫಾರದ್ದು ಜಾರಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಶನ್‌ಜಿಲ್ಲಾ ಸಮಿತಿ ವತಿಯಿಂದ ಮಂಗಳವಾರ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ಮಾಡಿದರು.
ಕಳೆದ ಎರಡುಮೂರು ತಿಂಗಳಿಂದ ಬಾಕಿ ಇರುವ ಗೌರವಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಕನಿಷ್ಠ ವೇತನ ಜಾರಿಗೊಳಿಸಬೇಕು. ಜಾತಿ ಪ್ರಮಾಣಪತ್ರಗಳ ಸಮೀಕ್ಷೆ, ಪ್ರಮಾಣಪತ್ರಗಳನ್ನು ಮನೆ ಮನೆಗೆ ವಿತರಿಸುವುದು, ಗೃಹಲಕ್ಷ್ಮಿ ಯೋಜನೆಯ ಸಮೀಕ್ಷೆ ಸೇರಿದಂತೆ ಅಂಗನವಾಡಿ ಕೆಲಸಕ್ಕೆ ಸಂಬಂಧಿಸದ ಹೆಚ್ಚುವರಿ ಕಾರ್ಯಗಳಿಂದ ಕಾರ್ಯಕರ್ತೆಯರನ್ನು ಮುಕ್ತಗೊಳಿಸಬೇಕು. 11ನೇ ವೇತನ ಆಯೋಗದ ಶಿಫಾರಸ್ಸು, ಗ್ರಾಚ್ಯುಟಿ ಸೇರಿದಂತೆ ಬಾಕಿ ಇರುವ ಎಲ್ಲ ಸೌಲಭ್ಯಗಳನ್ನು ಜಾರಿಗೊಳಿಸಬೇಕು.
ಆರನೇ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಬೇಕು, ಪ್ರಭಾರ ಭತ್ಯೆ ಹಾಗೂ ತುಟ್ಟಿಭತ್ಯೆ (ಡಿಎ) ಹೆಚ್ಚಿಸಬೇಕು. ಮಹಿಳಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಋತುಚಕ್ರದ ರಜೆ ನೀಡಬೇಕು. ಸಂಬಳ ಸಹಿತ ವೈದ್ಯಕೀಯ ರಜೆ ಮಂಜೂರು ಮಾಡಬೇಕು. ಬಾಕಿ ಇರುವ ಸಾದಿಲ್ವಾರು ಹಣವನ್ನು ಕೂಡಲೇ ಬಿಡುಗಡೆ ಮಾಡಿ, ಅದರ ಮೊತ್ತವನ್ನು ಹೆಚ್ಚಿಸಬೇಕು. ಕಳಪೆ ಗುಣಮಟ್ಟದ ಸಮವಸ್ತ್ರ ವಿತರಿಸುವುದನ್ನು ನಿಲ್ಲಿಸಿ, ಉತ್ತಮ ಗುಣಮಟ್ಟದ ಸಮವಸ್ತ್ರ ನೀಡಬೇಕು ಎಂದು ಮನವಿ ಮಾಡಿದರು.
ಸರ್ಕಾರಿ ಶಾಲೆಗಳಲ್ಲಿ ಎಲ್‌ಜಿಯುಕೆಜಿ ತರಗತಿಗಳನ್ನು ಆರಂಭಿಸಿ ನಾಲ್ಕು ವರ್ಷದೊಳಗಿನ ಮಕ್ಕಳನ್ನು ದಾಖಲಿಸಿಕೊಳ್ಳುತ್ತಿರುವುದರಿಂದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ದಾಖಲಾತಿ ಕಡಿಮೆಯಾಗುತ್ತಿರುವ ಸಮಸ್ಯೆಯನ್ನು ಪರಿಹರಿಸಬೇಕು. ಅಂಗನವಾಡಿ ಮಕ್ಕಳಿಗೆ ನೀಡುವ ಮೊಟ್ಟೆಯ ದರವನ್ನು ಹೆಚ್ಚಿಸಬೇಕು.
ತರಕಾರಿ ಖರೀದಿಗೆ ನೀಡುವ ಹಣವನ್ನು ಹೆಚ್ಚಿಸಬೇಕು. ಅಂಗನವಾಡಿ ಕಾರ್ಯಕರ್ತೆಯರನ್ನು ಬಿಎಲ್‌ಒ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕೆಂದು ಒತ್ತಾಯಿಸಿದರು.