ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಒತ್ತಾಯ

ಜೆಸ್ಕಾಂ ರಾಯಚೂರು ವೃತ್ತದಲ್ಲಿ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ರಾಜ್ಯ ಸರ್ಕಾರ ಪ್ರಕಟಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ವಿದ್ಯುತ್ ಕಾರ್ಮಿಕರ ಫೆಡರೇಷನ್ ಹಾಗೂ ಅಖಿಲ ಭಾರತ ವಿದ್ಯುತ್ ನೌಕರರ ಒಕ್ಕೂಟದ ನೇತೃತ್ವದಲ್ಲಿ ಶುಕ್ರವಾರ ರಾಯಚುರು ಜೆಸ್ಕಾಂ ಕಚೇರಿ ಎದುರು ಪ್ರತಿಭಟನೆ ಮಾಡಿದರು. ಸಂಘದ ರಾಜ್ಯಾಧ್ಯಕ್ಷ ಸತ್ಯಬಾಬು, ಗೌರವಾಧ್ಯಕ್ಷ ಡಿ.ಎಸ್. ಶರಣಬಸವ, ವೀರೇಶ, ಮುದ್ದುರಂಗಪ್ಪ, ಜಿಲ್ಲಾಧ್ಯಕ್ಷ ಕರಿಗೂಳಿ, ಕಾರ್ಯದರ್ಶಿ ಮಂಜುನಾಥ, ಸಾಯಿನಾಥ, ಸಾಬಣ್ಣ, ಶರಣಪ್ಪ, ಕೆ.ಜಿ. ವೀರೇಶ, ಮೌನೇಶ, ರಾಜುಗೌಡ, ಕೃಷ್ಣ ಇದ್ದರು.

Published on

ಜೆಸ್ಕಾಂ ರಾಯಚೂರು ವೃತ್ತದಲ್ಲಿ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ರಾಜ್ಯ ಸರ್ಕಾರ ಪ್ರಕಟಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ವಿದ್ಯುತ್ ಕಾರ್ಮಿಕರ ಫೆಡರೇಷನ್ ಹಾಗೂ ಅಖಿಲ ಭಾರತ ವಿದ್ಯುತ್ ನೌಕರರ ಒಕ್ಕೂಟದ ನೇತೃತ್ವದಲ್ಲಿ ಶುಕ್ರವಾರ ನಗರದ ಜೆಸ್ಕಾಂ ಕಚೇರಿ ಎದುರು ಪ್ರತಿಭಟನೆ ಮಾಡಿದರು.

ರಾಜ್ಯದ ವಿವಿಧ ವಿದ್ಯುತ್ ನಿಗಮಗಳಲ್ಲಿ ಸರ್ಕಾರದ ಅಧಿಸೂಚನೆಯಂತೆ ಕನಿಷ್ಠ ವೇತನ ಜಾರಿಗೊಳಿಸಲಾಗಿದ್ದರೂ, ಜೆಸ್ಕಾಂ ರಾಯಚೂರು ವೃತ್ತದಲ್ಲಿ ಮಾತ್ರ ಇದುವರೆಗೆ ಆದೇಶವನ್ನು ಸಮರ್ಪಕವಾಗಿ ಪಾಲಿಸಲಾಗುತ್ತಿಲ್ಲ. ಇದರಿಂದ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ವಿಳಂಬ ನೀತಿ ಅನುಸರಿಸದೆ ಕೂಡಲೇ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿ ಸಬೇಕು ಎಂದು ಒತ್ತಾಯಿಸಿದರು.
ನೌಕರರಿಗೆ ಪದೋನ್ನತಿ ನೀಡಿ, 33 ಕೆ.ವಿ. ಉಪವಿಭಾಗಗಳಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರ ಸ್ಥಾನಕ್ಕೆ ಅವರನ್ನು ನಿಯೋಜಿಸುವ ತೀರ್ಮಾನವನ್ನು ಕೈಬಿಡಬೇಕು. ಕೆಪಿಟಿಸಿಎಲ್ ಹಾಗೂ ಎಲ್ಲ ಎಸ್ಕಾಂಗಳಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವ ಕುರಿತು ಕೈಗಾರಿಕಾ ನ್ಯಾಯ ಮಂಡಳಿಯಲ್ಲಿ ವಿವಾದ ದಾಖಲಿಸಲಾಗಿದ್ದು, ವ್ಯಾಜ್ಯ ವಿಚಾರಣೆ ಹಂತದಲ್ಲಿದೆ. ಗುತ್ತಿಗೆ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವುದೇ ಈ ವಿವಾದದ ಪ್ರಮುಖ ವಿಷಯವಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಯ ಮಂಡಳಿಯಲ್ಲಿ ಪ್ರಕರಣ ಬಾಕಿ ಇರುವಾಗ ಕಾರ್ಮಿಕರನ್ನು ಬದಲಿಸಿ ಬೇರೆ ವ್ಯವಸ್ಥೆ ಮಾಡಬಾರದು ಎಂದು ಒತ್ತಾಯಿಸಿದರು.
15ರಿಂದ 25 ವರ್ಷಗಳವರೆಗೆ ಜೆಸ್ಕಾಂನ ವಿವಿಧ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ಕಾರ್ಮಿಕರನ್ನು ಬೇರೆ ಬ್ಯಾಚ್ ನ ನೌಕರರಿಂದ ಬದಲಿಸಿದರೆ, ದೀರ್ಘಕಾಲದಿಂದ ಕೆಲಸ ಮಾಡುತ್ತಿರುವ ಕಾರ್ಮಿಕರು ಉದ್ಯೋಗ ಮತ್ತು ಜೀವನೋಪಾಯ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಆದ್ದರಿಂದ ನೌಕರರಿಗೆ ಪದೋನ್ನತಿ ನೀಡುವ ಸಂದರ್ಭದಲ್ಲಿ ಹಲವು ವರ್ಷಗಳಿಂದ 33 ಕೆ.ವಿ. ಸ್ಟೇಷನ್‌ಗಳಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಕಾರ್ಮಿಕರನ್ನು ತೆಗೆದುಹಾಕುವ ಕ್ರಮ ಕೈಗೊಳ್ಳಬಾರದೆಮದು ಒತ್ತಾಯಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net