ಅಸ್ಸಾಂ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ,ಜಿಲ್ಲಾ ಬಿಜೆಪಿ ಯುವ ಮೋರ್ಚಾ ಘಟಕದಿಂದ ಗುರುವಾರ ರಾಯಚೂರಿ ಎಸ್ಪಿ ಅರುಣಾಂಗ್ಶು ಗಿರಿಗೆ ಮನವಿ ಸಲ್ಲಿಸಿದರು. ನಗರ ಶಾಸಕ ಡಾ.ಶಿವರಾಜ ಪಾಟೀಲ್, ಯುವಮೋರ್ಚಾ ಅಧ್ಯಕ್ಷ ವಿನಾಯಕರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ರಾಜಗುರು, ಜಂಬಣ್ಣ, ರವೀಂದ್ರ ಜಲ್ದಾರ ,ಊಟ್ಕರ ರಾಘವೇಂದ್ರ, ಪ್ರದೀಪ್ ಸಾನಬಾಳ , ಜೆ.ಎಂ.ಮೌನೇಶ್ ಇದ್ದರು.
ರಾಯಚೂರು ಅಸ್ಸಾಂ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಘಟಕದಿಂದ ಗುರುವಾರ ಎಸ್ಪಿ ಅರುಣಾಂಗ್ಶು ಗಿರಿಗೆ ಮನವಿ ಸಲ್ಲಿಸಿದರು.
ನಂತರ ನಗರ ಶಾಸಕ ಡಾ.ಶಿವರಾಜ ಪಾಟೀಲ್ ಮಾತನಾಡಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಅತ್ಯುನ್ನತ ರಾಜಕೀಯ ಸ್ಥಾನದಲ್ಲಿದ್ದುಕೊಂಡು ಜವಾಬ್ದಾರಿಯನ್ನೇ ಮರೆತಿದ್ದಾರೆ. ಅಸ್ಸಾಂನಲ್ಲಿ ಅವರು ನೀಡಿದ ಹೇಳಿಕೆಗಳು ಕೇವಲ ರಾಜಕೀಯ ಟೀಕೆಗಳಲ್ಲ, ಬದಲಾಗಿ ವಿವಿಧ ಸಮುದಾಯಗಳ ನಡುವೆ ದ್ವೇಷದ ಬೀಜ ಬಿತ್ತುವ ಮತ್ತು ರಾಷ್ಟ್ರೀಯ ಏಕತೆಗೆ ಧಕ್ಕೆ ತರುವಂತಹ ಪ್ರಚೋದನಾಕಾರಿ ಮಾತುಗಳಾಗಿವೆ. ಇಂತಹ ಹೇಳಿಕೆಗಳು ದೇಶದ ಆಂತರಿಕ ಭದ್ರತೆಗೆ ಮತ್ತು ಸಾಮುದಾಯಿಕ ಸೌಹಾರ್ದತೆಗೆ ದೊಡ್ಡ ಕುತ್ತು ತರುತ್ತವೆ. ಕಾನೂನಿನ ಚೌಕಟ್ಟನ್ನು ಮೀರಿ ಮಾತನಾಡಿರುವ ಖರ್ಗೆ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದರು.
ಯುವಮೋರ್ಚಾ ಅಧ್ಯಕ್ಷ ವಿನಾಯಕರಾವ್ ಮಾತನಾಡಿ ಕಾಂಗ್ರೆಸ್ ಪಕ್ಷದ ಬಳಿ ಅಭಿವೃದ್ಧಿಯ ಬಗ್ಗೆ ಮಾತನಾಡಲು ವಿಷಯಗಳೇ ಇಲ್ಲ. ರಾಹುಲ್ ಗಾಂಧಿ ಅವರಂತಹ ನಾಯಕರ ವೈಫಲ್ಯವನ್ನು ಮುಚ್ಚಿಹಾಕಲು ದಿನನಿತ್ಯ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ಟೀಕಿಸುವುದೇ ಅವರಿಗೆ ಕೆಲಸವಾಗಿದೆ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ ಪ್ರಿಯಾಂಕ ಖರ್ಗೆ ಅವರು ಕೇವಲ ಅಧಿಕಾರಕ್ಕಾಗಿ ಹಂಬಲಿಸುತ್ತಿದ್ದಾರೆ. ತನ್ನ ಮಗನನ್ನು ಮುಖ್ಯಮಂತ್ರಿ ಮಾಡಬೇಕೆಂಬ ಕನಸು ಕಾಣುತ್ತಿರುವ ಖರ್ಗೆ ಅವರಿಗೆ ದೇಶದ ಅಥವಾ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಕಾಳಜಿಯಿಲ್ಲ, ಮಾಧ್ಯಮಗಳಲ್ಲಿ ಸದಾ ಸುದ್ದಿಯಲ್ಲಿರಲು ಖರ್ಗೆ ತಂದೆ-ಮಕ್ಕಳು ಆರ್‌ಎಸ್‌ಎಸ್ ಬಿಜೆಪಿ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಹೀಗಾಗಿ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ರಾಜಗುರು, ಜಂಬಣ್ಣ, ರವೀಂದ್ರ ಜಲ್ದಾರ ,ಊಟ್ಕರ ರಾಘವೇಂದ್ರ, ಪ್ರದೀಪ್ ಸಾನಬಾಳ , ಜೆ.ಎಂ.ಮೌನೇಶ್, ಎನ್. ಕಾರ್ತಿಕ್ ರೆಡ್ಡಿ , ರವಿ ಗೌಡ ಮಿರಾಪುರ್ ಸೇರಿ ಅನೇಕರು ಇದ್ದರು.