ಸರ್ಕಾರಿ ಶಾಲೆಗೆ ಗುಣಮಟ್ಟದ ಶಿಕ್ಷಣ ನೀಡಲು ಒತ್ತಾಯ

ಸರ್ಕಾರಿ ಶಾಲೆಗಳ ಉಳಿವು ಹಾಗೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವಂತೆ ಒತ್ತಾಯಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆ ವತಿಯಿಂದ ಶನಿವಾರ ರಾಯಚೂರಿನ ಡಾ.ಬಿ.ಆರ್.ವೃತ್ತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಜಯ್ ಧರ್ಮಸಿಂಗ್ ಅವರಿಗೆ ಮನವಿ ಸಲ್ಲಿಸಿದರು. ಪ್ರಮುಖರಾದ ವಿದ್ಯಾ ಪಾಟೀಲ್, ರಾಧ, ಸಾವಿತ್ರಮ್ಮ, ರೇಣುಕಮ್ಮ, ಅಕ್ಕಮ್ಮ, ಶಾಂಭವಿ, ಹನುಮೇಶ, ಬಸವರಾಜ, ಗುರುರಾಜ ಪಾಟೀಲ್, ಮರಿಯಮ್ಮ, ಇಂದ್ರಮ್ಮ, ಸೈಯದ್ ಹಫಿಜುಲ್ಲಾ ಇದ್ದರು.
ಸರ್ಕಾರಿ ಶಾಲೆಗಳ ಉಳಿವು ಹಾಗೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವಂತೆ ಒತ್ತಾಯಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆ ವತಿಯಿಂದ ಶನಿವಾರ ರಾಯಚೂರಿನ ಡಾ.ಬಿ.ಆರ್.ವೃತ್ತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಜಯ್ ಧರ್ಮಸಿಂಗ್ ಅವರಿಗೆ ಮನವಿ ಸಲ್ಲಿಸಿದರು. ಪ್ರಮುಖರಾದ ವಿದ್ಯಾ ಪಾಟೀಲ್, ರಾಧ, ಸಾವಿತ್ರಮ್ಮ, ರೇಣುಕಮ್ಮ, ಅಕ್ಕಮ್ಮ, ಶಾಂಭವಿ, ಹನುಮೇಶ, ಬಸವರಾಜ, ಗುರುರಾಜ ಪಾಟೀಲ್, ಮರಿಯಮ್ಮ, ಇಂದ್ರಮ್ಮ, ಸೈಯದ್ ಹಫಿಜುಲ್ಲಾ ಇದ್ದರು.
Published on

ಸರ್ಕಾರಿ ಶಾಲೆಗಳ ಉಳಿವು ಹಾಗೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವಂತೆ ಒತ್ತಾಯಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆ ವತಿಯಿಂದ ಶನಿವಾರ ನಗರದ ಡಾ.ಬಿ.ಆರ್.ವೃತ್ತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಜಯ್ ಧರ್ಮಸಿಂಗ್ ಅವರಿಗೆ ಮನವಿ ಸಲ್ಲಿಸಿದರು.

ಶಿಕ್ಷಣ ಹಕ್ಕು ಕಾಯ್ದೆ ಜಾರಿಯಾಗಿ 17 ವರ್ಷಗಳು ಕಳೆದರೂ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲ. ದೇಶ ಸ್ವಾತಂತ್ರ್ಯದ ಸಂಭ್ರಮದಲ್ಲಿರುವ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳ ಮಕ್ಕಳು ಅವರ ಪೋಷಕರು ಗುಣಮಟ್ಟದ ಶಿಕ್ಷಣಕ್ಕಾಗಿ ಹೋರಾಟ ನಡೆಸಬೇಕಾಗಿರುವುದು ದುರದೃಷ್ಟಕರ ಸಂಗತಿಯಾಗಿದೆ.
ಸರ್ಕಾರಿ ಶಾಲೆಗಳ ಉಳಿವಿಗಾಗಿ ವೇದಿಕೆಯು ಕಳೆದ 10 ವರ್ಷಗಳಿಂದ ವಿವಿಧ ರೀತಿಯ ಹೋರಾಟಗಳನ್ನು ನಡೆಸುತ್ತಾ ಬಂದಿದ್ದರೂ, ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ. ಇದರ ಪರಿಣಾಮವಾಗಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಕುಸಿಯುತ್ತಿದೆ.
ಬಡವರು, ದಲಿತರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳು, ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣುಮಕ್ಕಳು ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇಂತಹ ಮಕ್ಕಳ ಭವಿಷ್ಯದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ ಎಂದು ದೂರಿದರು.ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು, ಕನಿಷ್ಠ ಶಿಕ್ಷಣ ಹಕ್ಕು ಕಾಯ್ದೆಯ ಮಾನದಂಡಗಳಿಗೆ ಅನುಗುಣವಾಗಿ, ತಕ್ಷಣ ಭರ್ತಿ ಮಾಡಬೇಕು. ಸರ್ಕಾರಿ ಶಾಲೆಗಳಿಗೆ ಶುದ್ದ ಕುಡಿಯುವ ನೀರು, ಸಮರ್ಪಕ ಶೌಚಾಲಯ, ಆಟದ ಮೈದಾನ, ಗ್ರಂಥಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.
ಶಿಕ್ಷಣ ಹಕ್ಕು ಕಾಯ್ದೆಯನ್ವಯ 1ರಿಂದ 5ನೇ ತರಗತಿಯವರೆಗೆ ನೆರೆಹೊರೆಯ ಶಾಲೆ ಹಾಗೂ 6ರಿಂದ 8ನೇ ತರಗತಿಯವರೆಗೆ 3 ಕಿ.ಮೀ. ವ್ಯಾಪ್ತಿಯೊಳಗೆ ಶಾಲೆ ಇರುವ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು. ಪ್ರತಿಯೊಂದು ಸರ್ಕಾರಿ ಶಾಲೆಗೆ ಒಬ್ಬ ಪರಿಚಾರಕರನ್ನು ಕೂಡಲೇ ನೇಮಿಸಬೇಕು.
ಸರ್ಕಾರ ಕೆಪಿಎಸ್ ಹಾಗೂ ಮ್ಯಾಗ್ನೆಟ್ ಶಾಲೆಗಳನ್ನು ಗುರುತಿಸುವ ಪ್ರಕ್ರಿಯೆಯನ್ನು ತಕ್ಷಣ ನಿಲ್ಲಿಸಬೇಕು. ರಾಜ್ಯದ ಹಲವು ಶಾಲೆಗಳಲ್ಲಿ ಶಿಕ್ಷಕರೇ ಇಲ್ಲದ ಪರಿಸ್ಥಿತಿ ಇದ್ದು, ಅಂತಹ ಶಾಲೆಗಳಿಗೆ ಕೂಡಲೇ ಖಾಯಂ ಶಿಕ್ಷಕರನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net