ಕಾರ್ಮಿಕ ಸಂಹಿತೆಗಳ ಅಧಿಸೂಚನೆ ಹಿಂಪಡೆಯಲು ಒತ್ತಾಯ

ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳ ಅಧಿಸೂಚನೆಯನ್ನು ಹಿಂಪಡೆಯಲು ಒತ್ತಾಯಿಸಿ ಎಐಸಿಸಿಟಿಯು ಜಿಲ್ಲಾ ಸಮಿತಿ ವತಿಯಿಂದ ರಾಯಚೂರಿನ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ  ಗುರುವಾರ ಪ್ರತಿಭಟನೆ ಮಾಡಿದರು.
ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳ ಅಧಿಸೂಚನೆಯನ್ನು ಹಿಂಪಡೆಯಲು ಒತ್ತಾಯಿಸಿ ಎಐಸಿಸಿಟಿಯು ಜಿಲ್ಲಾ ಸಮಿತಿ ವತಿಯಿಂದ ರಾಯಚೂರಿನ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಪ್ರತಿಭಟನೆ ಮಾಡಿದರು.
Published on
ರಾಯಚೂರು
ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳ ಅಧಿಸೂಚನೆಯನ್ನು ಹಿಂಪಡೆಯಲು ಒತ್ತಾಯಿಸಿ ಎಐಸಿಸಿಟಿಯು ಜಿಲ್ಲಾ ಸಮಿತಿ ವತಿಯಿಂದ ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಪ್ರತಿಭಟನೆ ಮಾಡಿದರು.

ಕೇಂದ್ರ ಸರ್ಕಾರವು ಕಾರ್ಮಿಕರ ಹಕ್ಕು ಗಳನ್ನು ದುರ್ಬಲಗೊಳಿಸುವ ಉದ್ದೇಶದಿಂದ ಹೊಸ ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತಂದಿದೆ. ಎಂದು ಆರೋಪಿಸಿದರು. ಮೇ 8ರಂದು ಕೇಂದ್ರ ಕಾರ್ಮಿಕ ಇಲಾಖೆ ಅಧಿಕೃತವಾಗಿ ಹೊರಡಿಸಿರುವ ಅಧಿಸೂಚನೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಜಾರಿಗೊಳಿಸದಂತೆ ತಡೆಹಿಡಿಯಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಅಜೀಜ್ ಜಾಗೀರದಾರ್, ಮುಖಂಡರಾದ ಜಿಲಾನಿ , ಭೀಮಯ್ಯ, ನಿಸಾರ್ ಅಹ್ಮದ, ಲಕ್ಷ್ಮಣ, ಈರಣ್ಣ, ವೀರನಗೌಡ, ವಿರೇಶ್, ಅಂಜನಯ್ಯ, ಯಲ್ಲಪ್ಪ, ರಾಮಸ್ವಾಮಿ, ನರಸಿಂಹ, ಸಣ್ಣ ನರಸಪ್ಪ, ಮಾರಣ್ಣ ಸೇರಿದಂತೆ ಅನೇಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net