ನಗರದ ಜಿಲ್ಲಾಧಿಕಾರಿಗಳ ಭವನದಲ್ಲಿ ಸೋಮವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ 8 ತಾಲೂಕು ಹಾಗೂ ಪಟ್ಟಣಗಳಲ್ಲಿ ವಿವಿಧ ಸ್ಥಳಗಳಲ್ಲಿ ಅನುಷ್ಠಾನ ಮಾಡುವ ಪೋಲಿಯೋ ಬೂತ್‌ಗಳ ಮಾಹಿತಿ ಪಡೆದು, ಈಗಾಗಲೆ ಜಿಲ್ಲೆಯಲ್ಲಿ ಒಟ್ಟು 2,60,002 ಮಕ್ಕಳನ್ನು ಗುರುತಿಸಲಾಗಿದ್ದು, ಮಕ್ಕಳಿಗೆ ಲಸಿಕೆ ನೀಡಲು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ 1,132 ಬೂತ್‌ಗಳು ಹಾಗೂ ಸಂತೆ, ಜಾತ್ರೆ, ಮಾರುಕಟ್ಟೆ, ರೈಲು ನಿಲ್ದಾಣ, ಬಸ್ ನಿಲ್ದಾಣ, ಜನ ವಸತಿ ಪ್ರದೇಶ ಸೇರಿದಂತೆ ಮುಂತಾದವುಗಳಲ್ಲಿ ಲಸಿಕೆ ಹಾಕಲು 53 ಟ್ರಾನ್ಸಿಟ್ ಬೂತ್‌ಗಳು ಹಾಗೂ ವಲಸೆ ಪ್ರದೇಶ, ಕಟ್ಟಡ ಕಾಮಗಾರಿ, ಇಟ್ಟಿಗೆ ಬಟ್ಟಿ, ಕಬ್ಬು ಕಡೆಯುವ ಜಾಗೆ, ಕುರಿಹಟ್ಟಿ, ಕೊಳಚೆ ಪ್ರದೇಶ,