ಪರ್ಯಾಯ ರಸಗೊಬ್ಬರ ಬಳಕೆಗೆ ಕೃಷಿ ಉಪ ನಿರ್ದೇಶಕ ಸಲಹೆ

ರಾಯಚೂರಿನ ರಾಯಚೂರು ವಕ್ಕಲುತನ ಹುಟ್ಟುವಳಿ ಮಾರಾಟ ಹಾಗೂ ಸಂಸ್ಕರಣ ಸಹಕಾರಿ ಸಂಘ ನಿಯಮಿತದ ಕಚೇರಿಗೆ ಬುಧವಾರ ಜಿಲ್ಲಾ ಕೃಷಿ ಇಲಾಖೆ ಉಪ ನಿರ್ದೇಶಕ ನಹೀಂ ಹುಸೇನ್ ಭೇಟಿ ನೀಡಿದರು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ದೀಪಾ ಕುಲಕರ್ಣಿ ಇದ್ದರು.
ರಾಯಚೂರಿನ ರಾಯಚೂರು ವಕ್ಕಲುತನ ಹುಟ್ಟುವಳಿ ಮಾರಾಟ ಹಾಗೂ ಸಂಸ್ಕರಣ ಸಹಕಾರಿ ಸಂಘ ನಿಯಮಿತದ ಕಚೇರಿಗೆ ಬುಧವಾರ ಜಿಲ್ಲಾ ಕೃಷಿ ಇಲಾಖೆ ಉಪ ನಿರ್ದೇಶಕ ನಹೀಂ ಹುಸೇನ್ ಭೇಟಿ ನೀಡಿದರು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ದೀಪಾ ಕುಲಕರ್ಣಿ ಇದ್ದರು.
Published on
ರಾಯಚೂರು ಡಿಎಪಿ ಮತ್ತು ಯೂರಿಯಾ ರಸಗೊಬ್ಬರಗಳಿಗೆ ಪರ್ಯಾಯವಾಗಿ ರೈತರು ಸಂಯುಕ್ತ ಗೊಬ್ಬರಗಳನ್ನು ಬಳಸಬೇಕೆಂದು ಜಿಲ್ಲಾ ಕೃಷಿ ಇಲಾಖೆ ಉಪ ನಿರ್ದೇಶಕ ನಹೀಂ ಹುಸೇನ್ ರೈತರಲ್ಲಿ ಮನವಿ ಮಾಡಿದರು.
ನಗರದ ರಾಯಚೂರು ವಕ್ಕಲುತನ ಹುಟ್ಟುವಳಿ ಮಾರಾಟ ಹಾಗೂ ಸಂಸ್ಕರಣ ಸಹಕಾರಿ ಸಂಘ ನಿಯಮಿತದ ಕಚೇರಿಗೆ ಬುಧವಾರ ಭೇಟಿ ನೀಡಿ, ರೈರಿಗೆ ಮಾಹಿತಿ ನೀಡಿದರು. ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಹದಿನೆಂಟು ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ ಜಲಜನಕ ಮತ್ತು ಆಮ್ಲಜನಕ ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತವೆ. 
ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ಪೊಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು ಕರೆಯಲಾಗುತ್ತದೆ. ಕ್ಯಾಲ್ಸಿಯಂ, ಮೆಗ್ನಿಷಿಯಂ, ಗಂಧಕ, ಕಬ್ಬಿಣ, ಜಿಂಕ್ ಬೋರಾನ, ತಾಮ್ರ, ಮ್ಯಾಂಗನೀಸ್ , ಮಾಲಬ್ಬಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು. ಇವುಗಳನ್ನು ಲಘು ಪೋಷಕಾಂಶಗಳೆಂದು ವಿಂಗಡಿಸಲಾಗಿದೆ. ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶ ಕೊರತೆಯಾದರೂ ಸಸ್ಯಗಳು ಸಮೃದ್ಧಿಯಾಗಿ ಬೆಳೆಯಲಾರವು. ಇದರಿಂದ ನೀರಿಕ್ಷಿತ ಇಳುವರಿ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ರೈತರು ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿಎಪಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿದ್ದು, ಪೊಟ್ಯಾಷ್ ಲಭ್ಯವಿರುವುದಿಲ್ಲ. ಪೊಟ್ಯಾಷ್ ಅಂಶವು ಬೆಳೆಗಳಿಗೆ ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿದೆ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ ಸಾರಜನಕ, ರಂಜಕ ಮತ್ತು ಪೋಟ್ಯಾಶ್ ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬೇಕು ಎಂದು ಸಲಹೆ ನೀಡಿದ್ದಾರೆ.
ಈ ಸಂದರ್ಭದಲ್ಲಿ  ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ದೀಪಾ ಕುಲಕರ್ಣಿ ಸೇರಿದಂತೆ ಕೃಷಿ ಇಲಾಖೆಯ ವಿವಿಧ ಅಧಿಕಾರಿಗಳು, ದಿ ರಾಯಚೂರು ಬಕ್ಕಲುತನ ಹುಟ್ಟುವಳಿ ಮಾರಾಟ ಹಾಗೂ ಸಂಸ್ಕರಣ ಸಹಕಾರಿ ಸಂಘ ನಿಯಮಿತದ ಅಧಿಕಾರಿ, ಸಿಬ್ಬಂದಿಗಳು ಹಾಗೂ ರೈತರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net