ಕಾಂಗ್ರೆಸ್ ನೀಡಿದ ಅಧಿಕಾರಕ್ಕೆ ಅಗೌರವ

ಬಸನಗೌಡ ಬಾದರ್ಲಿ
ಬಸನಗೌಡ ಬಾದರ್ಲಿ
Published on

ಪ್ರಮುಖ ಮುಖ್ಯಾಂಶಗಳು

  • ವಿಧಾನಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಹೇಳಿಕೆ
ಸಿಂಧನೂರು: ನಾನು ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತ. ಪಕ್ಷ ನೀಡಿದ ಅಧಿಕಾರಕ್ಕೆ ಅಗೌರವ ತೋರಲಾಗಿದೆ ಎಂದು ಎಂಎಲ್ಸಿ ಬಸನಗೌಡ ಬಾದರ್ಲಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಾಸಕರು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಗೌರವ ನೀಡದೆ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ. 
ನಾನು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷನಾದಾಗಿನಿಂದ ಎಂಎಲ್ಸಿ ಆಗುವವರೆಗೆ ನನ್ನ ಬೆಳವಣಿಗೆ ಸಹಿಸುತ್ತಿಲ್ಲ. ಕಾಂಗ್ರೆಸ್ ಶಾಸಕರಾಗಿದ್ದಕ್ಕಾಗಿಯೇ ಅನುದಾನ ಪಡೆದು ವಿದ್ಯಾರ್ಥಿ ರಥ ಬಸ್‌ಗೆ ಚಾಲನೆ ನೀಡಿದ್ದಾರೆ. 
ಪಕ್ಷದಿಂದ ಹೊರಬಂದು ಚುನಾವಣೆಗೆ ಸ್ಪರ್ಧಿಸಿದರೆ ಗೊತ್ತಾಗಲಿದೆ ಎಂದು ಸವಾಲು ಹಾಕಿದರು. ಶಾಸಕ ಹಂಪನಗೌಡ ಅವರು ನನ್ನ ಬೆಳವಣಿಗೆ ಸಹಿಸದೆ ವಿರೋಧ ಪಕ್ಷದವರೊಂದಿಗೆ ಹೊಂದಾಣಿಕೆ ರಾಜಕೀಯ ಮಾಡಿ, ಪಕ್ಷವನ್ನು ಕ್ಷೇತ್ರದಲ್ಲಿ ಮೂಲೆಗುಂಪು ಮಾಡುತ್ತಿದ್ದಾರೆ. ಈ ಬಗ್ಗೆ ನಾನು ಹೈಕಮಾಂಡ್ ಗಮನಕ್ಕೆ ತಂದಿರುವೆ. 
ಎಸ್ಸಿ-ಎಸ್ಟಿ ಸಮುದಾಯಕ್ಕೆ ಅನುಕೂಲವಾಗಲೆಂದು ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಸಲು ಆಯ್ಕೆ ಮಾಡಿದ ಫಲಾನುಭವಿಗಳ ಪಟ್ಟಿಯನ್ನು ರದ್ದು ಮಾಡುವಂತೆ ಶಾಸಕರು ಪತ್ರ ಬರೆದಿದ್ದಾರೆ ಎಂದು ಆರೋಪಿಸಿದರು. ಮುಖಂಡರಾದ ಶಿವಕುಮಾರ ಜವಳಿ, ವೀರರಾಜು ಇತರರಿದ್ದರು.
ಬಸನಗೌಡ ಬಾದರ್ಲಿ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net