ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿ ಅಸಂವಿಧಾನಿಕ

ಸಿಂಧನೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಶಿರಸ್ತೇದಾರ್ ಅಂಬಾದಾಸ್ ಅವರಿಗೆ ಮನವಿ ಸಲ್ಲಿಸಲಾಯಿತು.
ಸಿಂಧನೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಶಿರಸ್ತೇದಾರ್ ಅಂಬಾದಾಸ್ ಅವರಿಗೆ ಮನವಿ ಸಲ್ಲಿಸಲಾಯಿತು.
Published on
ಸಿಂಧನೂರು: ಧಾರವಾಡದಲ್ಲಿ ಆ.30ರಂದು ಆಯೋಜಿಸಿದ್ದ ಸಮುದಾಯ ಸಂಘಟನೆಗೆ 50ರ ಸಂಭ್ರಮ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿರುವ ಕಿಡಿಗೇಡಿಗಳನ್ನು ಬಂಧಿಸಲು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಶಿರಸ್ತೇದಾರ್ ಅಂಬಾದಾಸ್ ಅವರಿಗೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ಪ್ರೇಕ್ಷಕರಂತೆ ಕುಳಿತು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ ಗಲಭೆ ಸೃಷ್ಟಿಸಲು ಯತ್ನಿಸಿದ್ದಾರೆ. ನಟ ಪ್ರಕಾಶರಾಜ್ ಅವರ ಭಾವಚಿತ್ರಕ್ಕೆ ಮಸಿ ಎರಚಿ, ಹರಿದು ದಾಂಧಲೆ ಎಬ್ಬಿಸಲು ಯತ್ನಿಸಿದ್ದಾರೆ. ನಟ ಪ ್ರಕಾಶರಾಜ್ ವಿರುದ್ಧ ಘೋಷಣೆ ಕೂಗಿ ಸಮಾರಂಭಕ್ಕೆ ಅಡ್ಡಿಪಡಿಸಿರುವುದು ಅಸಂವಿಧಾನಿಕವಾಗಿದೆ. ಈ ದಾಳಿ ಪ್ರಜಾತಂತ್ರವಾದಿಗಳ ಮೇಲೆ ಬಿಜೆಪಿ-ಹಿಂದುತ್ವ ಪರಿವಾರದ ಗುಂಪುಗಳು ನಡೆಸುತ್ತಿರುವ ದ್ವೇಷ ರಾಜಕಾರಣದ ಭಾಗವಾಗಿದೆ ಎಂದು ಟೀಕಿಸಲಾಯಿತು.
ಒಕ್ಕೂಟದ ಸಂಚಾಲಕರಾದ ಡಿ.ಎಚ್.ಪೂಜಾರ್, ಡಿ.ಎಚ್.ಕಂಬಳಿ, ಚಂದ್ರಶೇಖರ ಗೊರೇಬಾಳ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಎಚ್.ಎಫ್.ಮಸ್ಕಿ, ಸಮುದಾಯ ಸಂಘಟನೆ ಸ್ಥಳೀಯ ಘಟಕದ ಅಧ್ಯಕ್ಷ ಶರಭಣ್ಣ ನಾಗಲಾಪೂರ, ಕರ್ನಾಟಕ ಪ್ರಾಂತ ರೈತಸಂಘದ ಜಿಲ್ಲಾ ಅಧ್ಯಕ್ಷ ಬಸವಂತರಾಯಗೌಡ ಕಲ್ಲೂರು, ಕೆಆರ್‌ಎಸ್ ತಾಲೂಕು ಅಧ್ಯಕ್ಷ ರಮೇಶ ಪಾಟೀಲ್ ಬೇರ‌್ಗಿ, ಜಮಾಅತೆ ಇಸ್ಲಾಮಿ ಹಿಂದ್ ಸ್ಥಳೀಯ ಘಟಕದ ಅಧ್ಯಕ್ಷ ಟಿ.ಹುಸೇನಸಾಬ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಮಂಜುನಾಥ ಗಾಂಧಿನಗರ, ಟಿಯುಸಿಐ ಜಿಲ್ಲಾಧ್ಯಕ್ಷ ಬಿ.ಎನ್.ಯರದಿಹಾಳ, ಗೋಪಾಲಕೃಷ್ಣ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net