ಅರ್ಹರಿಗೆ ಬಿಪಿಎಲ್ ಕಾರ್ಡ್ ವಿತರಿಸಿ

ಮಸ್ಕಿಯ ತಾಪಂ ಕಚೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶಿಲನೆ ಸಭೆ ನಡೆಯಿತು. ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಮೆಹಬೂಬ್‌ಸಾಬ್ ಮುದ್ದಾಪುರ, ತಾಪಂ ಇಒ ಅಮರೇಶ ಯಾದವ ಇದ್ದರು.
ಮಸ್ಕಿಯ ತಾಪಂ ಕಚೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶಿಲನೆ ಸಭೆ ನಡೆಯಿತು. ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಮೆಹಬೂಬ್‌ಸಾಬ್ ಮುದ್ದಾಪುರ, ತಾಪಂ ಇಒ ಅಮರೇಶ ಯಾದವ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಮೆಹಬೂಬ್‌ಸಾಬ್ ಸೂಚನೆ
ಮಸ್ಕಿ: ಬಿಪಿಎಲ್ ಕಾರ್ಡ್ ಹೊಂದಿದ್ದ ಬಡವರನ್ನೂ ಎಪಿಎಲ್ ಕಾರ್ಡ್‌ಗೆ ವರ್ಗಾಯಿಸಿದ್ದು ಸರಿಯಲ್ಲ. ಅಧಿಕಾರಿಗಳು ಕೂಡಲೇ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಮೆಹಬೂಬ್‌ಸಾಬ್ ಮುದ್ದಾಪುರ ಸೂಚನೆ ನೀಡಿದರು. 
ಪಟ್ಟಣದ ತಾಪಂ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶಿಲನೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. 
ಸರ್ಕರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜೆನೆಗಳು ಎಲ್ಲರಿಗೂ ಮುಟ್ಟಬೇಕು. ಯಾವುದೆ ಸಮಸ್ಯೆಗಳಿದ್ದಲ್ಲಿ ಕುಂಟು ನೆಪ ಹೇಳದೆ ಸರಿಪಡಿಸುವಂತೆ ತಿಳಿಸಿದರು. 
ತಾಪಂ ಇಒ ಅಮರೇಶ ಯಾದವ ಮಾತನಾಡಿ, ಮಸ್ಕಿ ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಅತಿ ಹೆಚ್ಚು ಫಲಾನುಭವಿಗಳಿದ್ದಾರೆ. ಆದರೆ, ಕೆಲಕಡೆ ದಾಖಲೆಗಳನ್ನು ಸರಿಯಾಗಿ ಒದಗಿಸದೆ ಇರುವುದರಿಂದ ಸಣ್ಣ ಪುಟ್ಟ ಸಮಸ್ಯೆಗಳಿದ್ದು, ಸರಿಪಡಿಸುವುದಾಗಿ ತಿಳಿಸಿದರು.  
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net