ಜಿಲ್ಲಾಡಳಿತದಿಂದ ಡಾ.ಬಾಬು ಜಗಜೀವನ ರಾಮ್ ಜಯಂತಿ ಆಚರಣೆ

ರಾಯಚೂರಿನ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತದಿಂದ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಅವರ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು  ಡಿಸಿ ನಿತೀಶ್ ಕೆ., ಚಾಲನೆ ನೀಡಿದರು. ಜಿಪಂ ಸಿಇಓ ಈಶ್ವರಕುಮಾರ ಕಾಂದೂ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮಹೋಪಾತ್ರ, ಎಸ್ಪಿ ಅರುಣಾಂಗ್ಶುಗಿರಿ, ತಹಶೀಲ್ದಾರ್ ಸುರೇಶ ವರ್ಮಾ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ  ಪ್ರವೀಣ್ ಕುಮಾರ್, ರಾಜೇಂದ್ರ ಜಲ್ದಾರ ಇದ್ದರು.
ರಾಯಚೂರಿನ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತದಿಂದ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಅವರ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಡಿಸಿ ನಿತೀಶ್ ಕೆ., ಚಾಲನೆ ನೀಡಿದರು. ಜಿಪಂ ಸಿಇಓ ಈಶ್ವರಕುಮಾರ ಕಾಂದೂ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮಹೋಪಾತ್ರ, ಎಸ್ಪಿ ಅರುಣಾಂಗ್ಶುಗಿರಿ, ತಹಶೀಲ್ದಾರ್ ಸುರೇಶ ವರ್ಮಾ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರವೀಣ್ ಕುಮಾರ್, ರಾಜೇಂದ್ರ ಜಲ್ದಾರ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಸಮಾನತೆಯ ವಿರುದ್ಧ ಹೋರಾಡಿದ ಧೀಮಂತ ನಾಯಕ
ರಾಯಚೂರು
ಜಾತಿ ತಾರತಮ್ಯ, ಅಸಮಾನತೆ, ಜಾತಿ ಹೆಸರಿನಲ್ಲಿ ಶೋಷಣೆ ನಡೆಯುತ್ತಿದ್ದ ಕಾಲಘಟ್ಟ ದಲ್ಲಿ ಕಷ್ಟಕರವಾದ ಬಾಲ್ಯಜೀವನದ ನಡುವೆ ಅಸಮಾನತೆಯ ವಿರುದ್ಧ ಹೋರಾಡಿದ ಧೀಮಂತ ನಾಯಕ ಬಾಬು ಜಗಜೀವನರಾಂ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೆ.ನಿತೀಶ ಹೇಳಿದರು.
ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಮ್ ಅವರ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಾತ್ಮಗಾಂಧೀಜಿ ಅವರಿಂದ ಪ್ರೇರೇಪಿತಗೊಂಡು, ಚಳವಳಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಅಸಮಾನತೆಯ ವಿರುದ್ಧ ಹೋರಾಡಿ, ನಂತರ ಸಂವಿಧಾನ ರಚನಾ ಸಮಿತಿಯ ಸದಸ್ಯರಾಗಿ, ಶೋಷಿತ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡುವಲ್ಲಿ ಜಗಜೀವನರಾಂರ ಪಾತ್ರ ಮಹತ್ವದ್ದಾಗಿದೆ. ಶಿಕ್ಷಣವನ್ನು ಆಯುಧವಾಗಿ ಸಿಕೊಂಡು ಕಷ್ಟದ ಜೀವನದಲ್ಲಿ ಹೋರಾಡಿದ ಬಾಭು ಜಗಜೀವನರಾಂ ಅವರು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಆಂಗ್ಲರ ವಿರುದ್ದ ಮಾತ್ರವಲ್ಲದೇ ಅಸಮಾನತೆಯ ವಿರುದ್ದ ಹೋರಾಡಬೇಕು ಎಂಬ ಸಂದೇವನ್ನು ನೀಡಿದ್ದಾರೆ ಎಂದರು.
ಮಹಾನಗರ ಪಾಲಿಕೆ ಸದಸ್ಯ ಕಾರ್ಯದರ್ಶಿ ಕೃಷ್ಣ ಶಾವಂತಗೇರಾ ಮಾತನಾಡಿ, ಸಮಾಜದಲ್ಲಿರುವ ಅಂಕುಡೊಂಕು ತಿದ್ದುವ ಸಲುವಾಗಿ ಜನ್ಮ ತಾಳಿ, ದೀನ ದಲಿತರ ಎರಡು ಕಣ್ಣುಗಳೆಂದರೆ ಅದು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಆಗಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದ ಮೊದಲು ನಗರದ ರೈಲ್ವೆ ನಿಲ್ದಾಣದ ಹತ್ತಿರ ಇರುವ ಡಾ.ಬಾಬು ಜಗಜೀವನ ರಾಮ್ ಅವರ ಪುತ್ಥಳಿಗೆ ವಿವಿಧ ಗಣ್ಯರಿಂದ ಪೂಜೆ ಕಾರ್ಯಕ್ರಮ ನೆರವೇರಿಸಿ, ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಜಿ.ಕುಮಾರ ನಾಯಕ, ಜಿಪಂ ಸಿಇಓ ಈಶ್ವರಕುಮಾರ ಕಾಂದೂ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮಹೋಪಾತ್ರ, ಎಸ್ಪಿ ಅರುಣಾಂಗ್ಶುಗಿರಿ, ತಹಶೀಲ್ದಾರ್ ಸುರೇಶ ವರ್ಮಾ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರವೀಣ್ ಕುಮಾರ್, ರಾಜೇಂದ್ರ ಜಲ್ದಾರ, ಮುಖಂಡರಾದ ರವಿ ಭೋಸರಾಜು, ನರಸಿಂಹಲು ಮಾಡಗಿರಿ, ಕೆ.ಶಾಂತಪ್ಪ, ಎಂ.ವಿರೂಪಾಕ್ಷಪ್ಪ, ರಾಜು, ಪವನ್ ಕುಮಾರ್, ರಾಜೇಂದ್ರ ಜಲ್ದಾರ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಮಾಜದ ಇತರರು ಇದ್ದರು.

ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವರು ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಆಗಮಿಸಿಲ್ಲ ಎಂದು ಸಮಾಜದ ಮುಖಂಡರು ರಂಗಮಂದಿರದ ಎದುರು ಧಿಡೀರ ಪ್ರತಿಭಟನೆ ನಡೆಸಿದರು. ಜಯಂತಿ ಕಾರ್ಯಕ್ರಮಕ್ಕೆ ಕಡ್ಡಾಯವಾ ಗಿ ಉಸ್ತುವಾರಿ ಸಚಿವರು, ಸೇರಿದಂತೆ ಜನಪ್ರತಿನಿಧಿಗಳು ಆಗಮಿಸಲೇ ಬೇಕು ಎಂದು ಈ ಮುಂಚೆಯೇ ಜಯಂತಿ ಪೂರ್ವ ಭಾವಿ ಸಭೆಯಲ್ಲಿಯೇ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು, ಆದರೆ ಒಳ ಮೀಸಲಾತಿ ಕುರಿತು ಸಮಾಜದ ಜನರು ಪ್ರಶ್ನೆ ಮಾಡುತ್ತಾರೆ ಎಂದು ಸಚಿವರು ಕಾರ್ಯ ಕ್ರಮಕ್ಕೆ ಬಾರದೇ ನುಣಿಚಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.ನಂತರ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಕೆ.ನಿತೀಶ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರಕುಮಾರ ಕಾಂದೂ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮಹೋಪಾತ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆಗಮಿಸಿದರು. ಜಗಜೀವನರಾಂರ ಸಮಾನತೆಯನ್ನು ಕನಸ್ಸನ್ನು ನನಸ್ಸಾಗಿಸಲು ನಾವೆಲ್ಲರೂ ಕೂಡಿ ಜಯಂತಿಯನ್ನು ಆಚರಿಸೋಣ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net