ಈ ಸಂದರ್ಭದಲ್ಲಿ ಬೀದರ್ ಬುದ್ಧ ವಿಹಾರನ ಬಂಅತೇಜಿ ಯಾಕತ್ನೂರ್, ಎಸ್ಪಿ ಅರುಣಾಂಗ್ಷು ಗಿರಿ., ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮಹೋಪಾತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ, ಎಸಿ ಡಾ.ಹಂಪಣ್ಣ ಸಜ್ಜನ್, ಜಿಪಂ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಮುಖ್ಯ ಲೆಕ್ಕಾಧಿಕಾರಿ ವಿಜಯಶಂಕರ್, ತಹಶಿಲ್ದಾರ್ ಸುರೇಶ್ ವರ್ಮಾ ಸೇರಿ ಅನೇಕರು ಇದ್ದರು.
ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ ಅಂಗವಾಗಿ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ, ಹೋರಾಟ, ಸಾಧನೆ ಕುರಿತು ಅವರ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು. ಛಾಯಾಚಿತ್ರಗಳನ್ನು ಜಿಲ್ಲಾಧಿಕಾರಿಗಳು, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ವಿವಿಧ ಗಣ್ಯರು, ಸಾರ್ವಜನಿಕರು ವೀಕ್ಷಣೆ ಮಾಡಿದರು.