ಜಿಲ್ಲಾಡಳಿತದಿಂದ ಡಾ.ಫ.ಗು.ಹಳಕಟ್ಟಿ ಜನ್ಮದಿನ ಆಚರಣೆ

ರಾಯಚೂರಿನ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ  ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ ಡಾ.ಫ.ಗು.ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಆಚರಣೆ ಮಾಡಲಾಯಿತು. ನಿವೃತ ಪ್ರಾಂಶುಪಾಲ ಡಾ.ಚನ್ನಬಸವಯ್ಯ ಹಿರೇಮಠ, ಜಿಲ್ಲಾಧಿಕಾರಿಗಳ ಕಚೇರಿಯ ತಹಶಿಲ್ದಾರ್ ಪರಶುರಾಮ, ಹಿರಿಯ ಸಾಹಿತ್ಯ ವೀರಹನುಮಾನ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಿಜಯರಾಜೇಂದ್ರ, ರಂಗಭೂಮಿಯ ಕಲಾವಿದ ವಿ.ಎನ್.ಹಕ್ಕಿ, ಪ್ರತಿಭಾ ಗೋನಾಳ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಸಂಶೋಧನಾ ಕ್ಷೇತ್ರಕ್ಕೆ ದೊಡ್ಡ ಕೊಡುಗೆ: ಡಾ.ಚನ್ನಬಸವಯ್ಯ ಹಿರೇಮಠ ಅಭಿಮತ
ರಾಯಚುರು ಶರಣರ ಜೀವನ ಮೌಲ್ಯಗಳನ್ನು ಕಾಲಾತೀತವಾದ ಕಾಲ ಗರ್ಭದಲ್ಲಿ ಹುದುಗಿ ಹೋಗಿದ್ದ ವಚನ ಸಾಹಿತ್ಯವೆಂಬ ಅನರ್ಘ್ಯ ರತ್ನವನ್ನು ಶೋಧಿಸಿ, ಅನ್ವೇಷಿಸಿ ಸಂಗ್ರಹಿಸಿ, ಸಂಪಾದಿಸಿ ಪ್ರಕಟಿಸಿ ಸಂಶೋಧನಾ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆಂದು ನಿವೃತ ಪ್ರಾಂಶುಪಾಲ ಡಾ.ಚನ್ನಬಸವಯ್ಯ ಹಿರೇಮಠ ಹೇಳಿದರು.
ನಗರದ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ ಡಾ.ಫ.ಗು.ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಮಾತನಾಡಿದರು.
ಒಂದು ವೇಳೆ ಶರಣ ಸಾಹಿತ್ಯದ ಕಡೆಗೆ ಲಕ್ಷ್ಯ ಹರಿಸದೇ ಇದ್ದರೆ ಇಂದು ನಮಗೆ ಶಿವಶರಣರ ವಚನಗಳು ದೊರಕುತ್ತಿರಲಿಲ್ಲ. ಕತ್ತಲ ಕಾಲ ಗರ್ಭದಲ್ಲಿದ್ದ ವಚನಗಳನ್ನು ಒಬ್ಬ ಸಾಮಾನ್ಯ ವಕೀಲರಾಗಿದ್ದುಕೊಂಡು ಶರಣರ ತತ್ವಾದರ್ಶಗಳು ಅವರೊಳಗಿದ್ದ ವೈಚಾರಿಕ ಮಾನವ ಪ್ರಜ್ಞೆಯನ್ನು ಎತ್ತಿ ತೋರಿಸಿದ ಕೀರ್ತಿಗೆ ಭಾಜನರಾಗಿದ್ದಾರೆ ಎಂದರು.
ಡಾ.ಫ.ಗು. ಹಳಕಟ್ಟಿಯವರು ಪ್ರಾಥಮಿಕ ಶಿಕ್ಷಣ ಧಾರವಾಡದಲ್ಲಿ ಪಡೆದರು. 1896ರಲ್ಲಿ ಮ್ಯಾಟ್ರಿಕ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾದರು. ಮುಂಬೈ ಸೇಂಟ್ ಝೇವಿಯರ್ ಕಾಲೇಜಿನಿಂದ 1901ರಲ್ಲಿ ಬಿಎಸ್‌ಸಿ ದ್ವಿತೀಯ ದರ್ಜೆ, 1904ರಲ್ಲಿ ಎಲ್‌ಎಲ್‌ಬಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದರು. 1904ರಲ್ಲಿ ಬೆಳಗಾವಿಯಲ್ಲಿ ವಕೀಲಿ ವೃತ್ತಿ ಆರಂಭಿಸಿದರು. ಕೆಲವೇ ವರ್ಷಗಳಲ್ಲಿ ಜನಪ್ರಿಯ ವಕೀಲರಾದರು. 1923ರಲ್ಲಿ ವಿಜಾಪುರಕ್ಕೆ ಬಂದು ನೆಲೆಸಿದರು. ಅದೇ ವರ್ಷ ಅವರ ದಕ್ಷ ವಕೀಲಿ ವೃತ್ತಿ ನೆನೆದ ಸರಕಾರ ಅವರನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಮತ್ತು ಸರ್ಕಾರಿ ಪ್ಲೇಡರರೆಂದು ನೇಮಿಸಿತು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ತಹಶಿಲ್ದಾರ್ ಪರಶುರಾಮ, ಹಿರಿಯ ಸಾಹಿತ್ಯ ವೀರಹನುಮಾನ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಿಜಯರಾಜೇಂದ್ರ, ರಂಗಭೂಮಿಯ ಕಲಾವಿದ ವಿ.ಎನ್.ಹಕ್ಕಿ, ಪ್ರತಿಭಾ ಗೋನಾಳ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net