ಬೀದಿ ನಾಯಿಗಳ ದಾಳಿ ತಡೆಗೆ ಜಿಲ್ಲಾಡಳಿತದ ಕಟ್ಟುನಿಟ್ಟಿನ ಕ್ರಮ

ರಾಯಚೂರಿನ ಜಿಲ್ಲಾಧಿಕಾರಿಗಳ ಭವನದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಪೂವಿತಾ ಎಸ್ . ಅಧ್ಯಕ್ಷತೆಯಲ್ಲಿ   ಬೀದಿ ನಾಯಿಗಳ ಹಾವಳಿ ತಡೆಗಟ್ಟುವಲ್ಲಿ ಸಮಿತಿಯ ಕಾರ್ಯ ಚಟುವಟಿಕೆಗಳ ಕುರಿತು ಚರ್ಚಿಸಲು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸಭೆ ನಡೆಸಿದರು. ಜಿಪಂ ಸಿಇಓ ಈಶ್ವರ ಕುಮಾರ ಕಾಂದೊ, ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮಹೋಪಾತ್ರ, ಎಸಿ ಡಾ.ಹಂಪಣ್ಣ ಸಜ್ಜನ್, ಎಎಸ್ಪಿ  ಜಿ.ಹರೀಶ್, ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಪೋಮ್ ಸಿಂಗ್, ಡಿಎಚ್‌ಓ ಡಾ.ನಂದಿತಾ ಎಂ.ಎನ್., ಪಿಡಿ ತಿಮ್ಮಪ್ಪ ಬಿರಾದಾರ್ ಇದ್ದರು.
ರಾಯಚೂರಿನ ಜಿಲ್ಲಾಧಿಕಾರಿಗಳ ಭವನದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಪೂವಿತಾ ಎಸ್ . ಅಧ್ಯಕ್ಷತೆಯಲ್ಲಿ ಬೀದಿ ನಾಯಿಗಳ ಹಾವಳಿ ತಡೆಗಟ್ಟುವಲ್ಲಿ ಸಮಿತಿಯ ಕಾರ್ಯ ಚಟುವಟಿಕೆಗಳ ಕುರಿತು ಚರ್ಚಿಸಲು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸಭೆ ನಡೆಸಿದರು. ಜಿಪಂ ಸಿಇಓ ಈಶ್ವರ ಕುಮಾರ ಕಾಂದೊ, ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮಹೋಪಾತ್ರ, ಎಸಿ ಡಾ.ಹಂಪಣ್ಣ ಸಜ್ಜನ್, ಎಎಸ್ಪಿ ಜಿ.ಹರೀಶ್, ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಪೋಮ್ ಸಿಂಗ್, ಡಿಎಚ್‌ಓ ಡಾ.ನಂದಿತಾ ಎಂ.ಎನ್., ಪಿಡಿ ತಿಮ್ಮಪ್ಪ ಬಿರಾದಾರ್ ಇದ್ದರು.
Published on
ರಾಯಚೂರು
ಬೀದಿ ನಾಯಿಗಳಿಂದ ಮಕ್ಕಳು ಹಾಗೂ ಸಾರ್ವಜನಿಕರ ಮೇಲೆ ಜಿಲ್ಲೆಯ ಅಲ್ಲಲ್ಲಿ ನಡೆಯುತ್ತಿರುವ ದಾಳಿ ಪ್ರಕರಣಗಳನ್ನು ತಡೆಗಟ್ಟುವ ಉದ್ದೇಶದಿಂದ ಸಭೆ ಕರೆಯಲಾಗಿದ್ದು , ಈ ಕುರಿತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಇಂತಹ ಪ್ರಕರಣಗಳು ಜಿಲ್ಲೆಯಲ್ಲಿ ಮರು ಕಳಿಸದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಭವನದಲ್ಲಿ ಮಂಗಳವಾರ ಬೀದಿ ನಾಯಿಗಳ ಹಾವಳಿ ತಡೆಗಟ್ಟುವಲ್ಲಿ ಸಮಿತಿಯ ಕಾರ್ಯ ಚಟುವಟಿಕೆಗಳ ಕುರಿತು ಚರ್ಚಿಸಲು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು, ಈ ಹಿಂದೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬೀದಿ ನಾಯಿಗಳ ದಾಳಿಯಿಂದ ಮಕ್ಕಳು ಗಾಯಗೊಂಡಿರುವ ಹಾಗೂ ಕೆಲವು ದುರ್ಘಟನೆಗಳಲ್ಲಿ ಮಕ್ಕಳ ಸಾವು ಸಂಭವಿಸಿರುವ ಹಿನ್ನೆಲೆಯಲ್ಲಿ, ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೀದಿ ನಾಯಿಗಳಿಗೆ ಆಹಾರ ಹಾಕುವವರು ಹಾಗೂ ಮಟನ್ ಅಂಗಡಿಗಳ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ನಿಯಮ ಬಾಹಿರವಾಗಿ ವಿಲೇವಾರಿ ಮಾಡುವವರ ವಿರುದ್ಧ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುವುದು. ಮಟನ್ ತ್ಯಾಜ್ಯ ಸಾಗಿಸುವ ವಾಹನಗಳ ಮೇಲೂ ನಿಯಮ ಉಲ್ಲಂಘನೆ ಕಂಡು ಬಂದರೆ ದಂಡಾನಾತ್ಮಕ ಕ್ರಮ ಜರುಗಿಸಲಾಗುವುದು ಎಂದರು.
ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಕ್ರೂರ ಹಾಗೂ ಅಕ್ರಮಣಕಾರಿ ನಾಯಿಗಳು ಕಂಡುಬಂದರೆ ತಕ್ಷಣ ಸಂಬಂಧಿತ ನೋಡಲ್ ಅಧಿಕಾರಿಗಳು ಪಶುವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಮಾಹಿತಿ ಪಡೆದ ತಕ್ಷಣ ಸಂಬಂಧಿಸಿದವರು ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರತಿ ಗ್ರಾಮ ಮತ್ತು ವಾರ್ಡ್ ಮಟ್ಟದಲ್ಲಿಯು ಸಭೆ ನಡೆಸಿ ಬೀದಿ ನಾಯಿಗಳನ್ನು ಗುರುತಿಸುವುದು, ಶಾಲೆಗಳು, ಆಸ್ಪತ್ರೆಗಳು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು, ಮಟನ್ ಅಂಗಡಿಗಳು ಸೇರಿದಂತೆ ಜನಸಂದಣಿ ಪ್ರದೇಶಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಿ ನಿರಂತರ ನಿಗಾ ವಹಿಸುವುದರ ಜೊತೆಗೆ ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಜಿಪಂ ಸಿಇಓ ಈಶ್ವರ ಕುಮಾರ ಕಾಂದೊ, ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮಹೋಪಾತ್ರ, ಎಸಿ ಡಾ.ಹಂಪಣ್ಣ ಸಜ್ಜನ್, ಎಎಸ್ಪಿ ಜಿ.ಹರೀಶ್, ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಪೋಮ್ ಸಿಂಗ್, ಡಿಎಚ್‌ಓ ಡಾ.ನಂದಿತಾ ಎಂ.ಎನ್., ಪಿಡಿ ತಿಮ್ಮಪ್ಪ ಬಿರಾದಾರ್ ಸೇರಿ ಅನೇಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net