ಅಪ್ರಾಪ್ತರಿಗೆ ಬೈಕ್ ಚಲಾಯಿಸಲು ನೀಡದಿರಿ

ಮುದಗಲ್ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ವೆಂಕಟೇಶ ಮಾಡಗೇರಿ ಅಧ್ಯಕ್ಷತೆಯಲ್ಲಿ ಎಸ್ಸಿ-ಎಸ್ಟಿ ಸಮುದಾಯದವರ ಕುಂದು ಕೊರತೆ ಸಭೆ ನಡೆಯಿತು.
ಮುದಗಲ್ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ವೆಂಕಟೇಶ ಮಾಡಗೇರಿ ಅಧ್ಯಕ್ಷತೆಯಲ್ಲಿ ಎಸ್ಸಿ-ಎಸ್ಟಿ ಸಮುದಾಯದವರ ಕುಂದು ಕೊರತೆ ಸಭೆ ನಡೆಯಿತು.
Published on

ಮುದಗಲ್: ವಿದ್ಯಾರ್ಥಿಗಳು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗುತ್ತಿದ್ದು, ಪಾಲಕರು ಎಚ್ಚರಿಕೆಯಿಂದ ಇರಬೇಕೆಂದು ಪಿಎಸ್‌ಐ ವೆಂಕಟೇಶ ಮಾಡಗೇರಿ ಹೇಳಿದರು.

ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನರ ಕುಂದು ಕೊರತೆ ಸಭೆಯಲ್ಲಿ ಮಂಗಳವಾರ ಮಾತನಾಡಿದರು. ಅಪ್ರಾಪ್ತರಿಗೆ ಬೈಕ್-ಕಾರು ಚಲಾಯಿಸಲು ನೀಡಬಾರದು. ಅನುಮಾನಾಸ್ಪದ ವ್ಯಕ್ತಿಗಳ ಸಂಚಾರ, ಅಕ್ರಮ ಚಟುವಟಿಕೆ ಕಂಡುಬಂದರೆ 112 ಸಂಖ್ಯೆಗೆ ಕರೆ ಮಾಡಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರು ವಾಸವಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ಕಾನೂನಿನ ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗುವುದು. ಈ ಮೂಲಕ ಪೊಲೀಸ್ ಇಲಾಖೆಯ ಬಗ್ಗೆ ಹೆಚ್ಚಿನ ಮಾಹಿತಿ ಒದಗಿಸಲಾಗವುದು ಎಂದರು.

ಪ್ರಮುಖರಾದ ವೆಂಕಟೇಶ ಹಿರೇಮನಿ, ಬಸವರಾಜ ಬಂಕದಮನಿ, ಮೌನೇಶ ಚಲುವಾದಿ, ಹುಲುಗಪ್ಪ ಚಲುವಾದಿ, ನಾಗರಾಜ ತಳವಾರ, ಹನುಮಂತ ಬಡಿಗೇರ್, ಹನುಮಂತ ಆಶಿಹಾಳ, ಬಸವರಾಜ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net