ಶರಣರ ಸದ್ವಿಚಾರಗಳನ್ನು ಮೈಗೂಡಿಸಿಕೊಳ್ಳಿ

ಸಿಂಧನೂರಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಮಾಲಿಕೆ ಕಾರ್ಯಕ್ರಮವನ್ನು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಶೇಖರಯ್ಯ ಉದ್ಘಾಟಿಸಿದರು. ಕನ್ನಡ ಉಪನ್ಯಾಸಕ ಶರಣಪ್ಪ ಹೊಸಳ್ಳಿ, ಕಸಾಪ ತಾಲೂಕು ಅಧ್ಯಕ್ಷ ಎಚ್.ಎಫ್.ಮಸ್ಕಿ, ಪ್ರಮುಖರಾದ ನಿರುಪಾದೆಪ್ಪ ಗುಡಿಹಾಳ ವಕೀಲ, ಶಿವಬಸನಗೌಡ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಶರಣರ ಸದ್ವಿಚಾರ
  • ವಿದ್ಯಾಭ್ಯಾಸ
  • ದತ್ತಿ ಉಪನ್ಯಾಸ

ಶರಣರ ಸದ್ವಿಚಾರಗಳನ್ನು ಮೈಗೂಡಿಸಿಕೊಳ್ಳಿ

ಸಿಂಧನೂರು: ವಿದ್ಯಾರ್ಥಿಗಳು ಮೊಬೈಲ್ ಗೀಳು ಬಿಟ್ಟು ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಹರಿಸಬೇಕು ಎಂದು ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಶರಣಪ್ಪ ಹೊಸಳ್ಳಿ ಹೇಳಿದರು.
ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಹಾಗೂ ತಾಲೂಕು ಕಸಾಪ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಶರಣ ಸಾಹಿತ್ಯ ಜೀವನದ ಮೌಲ್ಯಗಳನ್ನು ಕಟ್ಟಿಕೊಡುತ್ತದೆ. ಶರಣರ ವಚನಗಳು, ಚಿಂತನೆ, ಸದ್ವಿಚಾರಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಶೇಖರಯ್ಯ ಮಾತನಾಡಿ, ಶರಣ ಸಾಹಿತ್ಯದಲ್ಲಿ ದಾಸರು, ಸಂತರು, ಶ್ರೇಷ್ಠ ವಚನಕಾರರು ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಮಾನವೀಯ ಮೌಲ್ಯ ಸಾರುವ ಅಂಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಸಾಪ ತಾಲೂಕು ಅಧ್ಯಕ್ಷ ಎಚ್.ಎಫ್.ಮಸ್ಕಿ, ಪ್ರಮುಖರಾದ ನಿರುಪಾದೆಪ್ಪ ಗುಡಿಹಾಳ ವಕೀಲ, ಶಿವಬಸನಗೌಡ, ಅಮರೇಶ ಮಿಟ್ಟಿಮನಿ, ನಾಗರಾಜ ಬೊಮ್ಮನಾಳ, ಹುಡಸಪ್ಪ ಹುಡಸೂರು, ಸಿದ್ದನಗೌಡ, ಬಸವರಾಜ ಯಲಬುರ್ಗಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net