ಬಿಜೆಪಿ ಸಂಘಟನೆಗೆ ಒತ್ತು ಕೊಡಿ

ಮಸ್ಕಿಯಲ್ಲಿ ಬಿಜೆಪಿ ಪ್ರ-ಶಿಕ್ಷಣ ಕಾರ್ಯಾಗಾರವನ್ನು ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಉದ್ಘಾಟಿಸಿದರು. ಪ್ರಮುಖರಾದ ಶರಣಯ್ಯ ಸೊಪ್ಪಿಮಠ, ಬಸವಂತರಾಯ ಕುರಿ, ಚಂದ್ರಕಾಂತ ಪಾಟೀಲ್ ಇತರರಿದ್ದರು.
ಮಸ್ಕಿಯಲ್ಲಿ ಬಿಜೆಪಿ ಪ್ರ-ಶಿಕ್ಷಣ ಕಾರ್ಯಾಗಾರವನ್ನು ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಉದ್ಘಾಟಿಸಿದರು. ಪ್ರಮುಖರಾದ ಶರಣಯ್ಯ ಸೊಪ್ಪಿಮಠ, ಬಸವಂತರಾಯ ಕುರಿ, ಚಂದ್ರಕಾಂತ ಪಾಟೀಲ್ ಇತರರಿದ್ದರು.
Published on
ಮಸ್ಕಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ಪ್ರತಿಯೊಬ್ಬ ಕಾರ್ಯಕರ್ತ ಈಗಿನಿಂದಲೇ ಪಕ್ಷ ಸಂಘಟನೆಗೆ ಒತ್ತು ನೀಡಬೇಕು. ಕೇಂದ್ರ ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಿಳಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಳ ಹೇಳಿದರು. 
ಪಟ್ಟಣದ ಭ್ರಮರಾಂಬ ದೇವಸ್ಥಾನದಲ್ಲಿ ಶುಕ್ರವಾರ ಬಿಜೆಪಿ ಪ್ರ-ಶಿಕ್ಷಣ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಜನರಿಗೆ ಮನದಟ್ಟು ಮಾಡಬೇಕು. ಕಾಂಗ್ರೆಸ್ ಸರ್ಕಾರದ ಆಡಳಿತ ವಿಫಲವಾಗಿದ್ದು, ಜನ ಬೇಸತ್ತಿದ್ದಾರೆ. ಬಿಜೆಪಿ ಜನಪರವಾಗಿ ಕೆಲಸ ಮಾಡುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾಗಿದೆ ಎಂದರು.
ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಿಜೆಪಿ ಸರ್ಕಾರದ ಕೆಲ ತಪ್ಪು ನಿರ್ಧಾರಗಳು ಕಾರಣವಾದವು. 2028 ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಂಘಟಿತ ಪ್ರಯತ್ನ, ಮತದಾರರಲ್ಲಿ ಜಾಗೃತಿ ಮೂಡಿಸಲು ಕಾರ್ಯಕರ್ತರು ಸಿದ್ಧರಾಗಬೇಕು ಎಂದರು. 
ಮಂಡಲ ಅಧ್ಯಕ್ಷ ಶರಣಯ್ಯ ಸೊಪ್ಪಿಮಠ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಬಸವಂತರಾಯ ಕುರಿ, ಜಿಲ್ಲಾ ಉಪಾಧ್ಯಕ್ಷ ಚಂದ್ರಕಾಂತ ಪಾಟೀಲ್, ಪ್ರಧಾನ ಕಾರ್ಯದರ್ಶಿ ಸಂತೋಷ ರಾಜಗುರು, ಎಸ್ಸಿ ಮೋರ್ಚಾ ರಾಜ್ಯ ವಕ್ತಾರ ಶರಣಬಸವ ವಕೀಲ, ಪುರಸಭೆ ಅಧ್ಯಕ್ಷ ಸುರೇಶ ಹರಸೂರು, ಶಾರದಾ ರಾಠೋಡ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net