9ಹೆಚ್ಚುವರಿ ಮತಗಟ್ಟೆಗಳ ಸ್ಥಾಪನೆ

ಸತ್ಯಮ್ಮ
ಸತ್ಯಮ್ಮ
Published on

ಪ್ರಮುಖ ಮುಖ್ಯಾಂಶಗಳು

  • ವಿಧಾನಸಭಾ
  • ಕ್ಷೇತ್ರ
  • ಮತಗಟ್ಟೆ

ಲಿಂಗಸುಗೂರು: ಮತದಾರರ ಸುಲಭ ಮತ್ತು ಆರಾಮದಾಯಕ ಮತದಾನಕ್ಕಾಗಿ ವಿಧಾನಸಭಾ ಕ್ಷೇತ್ರಗಳಲ್ಲಿ 9ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ತಹಸೀಲ್ದಾರ್ ಸತ್ಯಮ್ಮ ತಿಳಿಸಿದ್ದಾರೆ.

ಒಂದು ಮತಗಟ್ಟೆಯಲ್ಲಿ ಗರಿಷ್ಠ ಮತದಾರರ ಸಂಖ್ಯೆ 1200ಕ್ಕಿಂತ ಹೆಚ್ಚು ಮತದಾರರಿರುವ ಬೂತ್‌ಗಳನ್ನು ವಿಭಜಿಸಿ ಹೊಸ ಮತಗಟ್ಟೆಗಳನ್ನು ಮಾಡಲಾಗಿದೆ.
ಈ ಮೊದಲು 285ಮತಗಟ್ಟೆಗಳಿದ್ದವು ಹೊಸ 9ಮತಗಟ್ಟೆಗಳು ಸೇರಿ 294ಮತಗಟ್ಟೆಗಳು ಕ್ಷೇತ್ರದಲಿವೆ. ರಾಯದುರ್ಗ 3/ಎ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ-1, ಪರಾಂಪೂರು-2 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ-1, ದೇವರಭೂಪೂರು-3 ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಯಲಗಟ್ಟ-2 ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ, ಪೂಲಭಾವಿ-2 ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಗೊರೇಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ-2, ಕಾಳಾಪೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ-1, ಮುದಗಲ್ಲ-16 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಗಳಪೇಟೆ, ವ್ಯಾಕರನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ-1, ಹೊಸ ಮತಗಟ್ಟೆಗಳಾಗಿವೆ ಎಂದು ತಿಳಿಸಿರುತ್ತಾರೆ.
ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ 2026ಕ್ಕೆ ಸಂಬಂಧಿಸಿದಂತೆ 2026 ಸೆಪ್ಟೆಂಬರ್-1ರ ಪ್ರಕಾರ ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ ಆಗಸ್ಟ್ 29, ಆಗಸ್ಟ್ 30 ಹಾಗೂ ಸೆಪ್ಟೆಂಬರ್ 19 ಮತ್ತು ಸೆಪ್ಟೆಂಬರ್ 20 ರಂದು ಮತದಾರರ ವಿಶೇಷ ನೋಂದಣಿ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ತಹಸೀಲ್ದಾರ್ ಸತ್ಯಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net