ಸಿಂಧನೂರಿನ ತಹಸಿಲ್ ಕಚೇರಿ ಶಿರಸ್ತೇದಾರ್ ಪಾರ್ವತಿಗೆ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ತಾಲೂಕು ಸಮಿತಿ ಮನವಿ ಸಲ್ಲಿಸಿತು. ಸಂಘಟನೆ ಜಿಲ್ಲಾಧ್ಯಕ್ಷ ಡಾ.ವಸಿಂ, ತಾಲೂಕಾಧ್ಯಕ್ಷ ಅಬುಲೈಸ್ ನಾಯಕ, ಮನುಜಮತ ಬಳಗದ ಬಸವರಾಜ ಬಾದರ್ಲಿ, ಪ್ರಮುಖರಾದ ಚಾಂದ್‌ಪಾಷಾ, ಸೊಹೈಲ್ ದೇಸಾಯಿ, ಇಸ್ಮಾಯಿಲ್, ನಯೀಮ್ ಇರ್ಫಾನ್, ಮುಷ್ತಾಕ್, ಅಝರ್, ಶಬೀರ್, ಆಸಿಫ್, ಫಾರೂಕ್, ರಿಯಾಜ್, ಯಾಸೀನ್ ಮುಲ್ಲಾ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಒತ್ತಾಯ
ಸಿಂಧನೂರಿನಲ್ಲಿ ಶಿರಸ್ತೇದಾರ್ ಪಾರ್ವತಿಗೆ ಮನವಿ
ಸಿಂಧನೂರು: ರಾಜ್ಯದ ಯುವಜನರ ಹಿತಾಸಕ್ತಿಗಳ ರಕ್ಷಣೆಗೆ ಹಾಗೂ ಅವರ ಸಮಗ್ರ ಅಭಿವೃದ್ಧಿಗೆ ಕರ್ನಾಟಕ ಯುವ ಆಯೋಗ ಸ್ಥಾಪಿಸಬೇಕೆಂದು ಒತ್ತಾಯಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ತಾಲೂಕು ಸಮಿತಿ ಶನಿವಾರ ತಹಸಿಲ್ ಕಚೇರಿ ಶಿರಸ್ತೇದಾರ್ ಪಾರ್ವತಿಗೆ ಮನವಿ ಸಲ್ಲಿಸಿತು.
ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚು ಯುವಜನರಿದ್ದು, ಅವರು ಶಿಕ್ಷಣ, ಉದ್ಯೋಗ, ಮಾನಸಿಕ ಆರೋಗ್ಯ, ಸಾಮಾಜಿಕ ಭದ್ರತೆ ಮತ್ತು ನಾಗರಿಕ ಭಾಗವಹಿಸುವಿಕೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದಾರೆ. ನಿರುದ್ಯೋಗ, ಮಾನಸಿಕ ಒತ್ತಡ, ಮಾದಕ ವ್ಯಸನ, ಸೈಬರ್ ವಂಚನೆ, ಸಾಮಾಜಿಕ ಅಸುರಕ್ಷತೆ ಮತ್ತು ನಿರ್ಧಾರ ಪ್ರಕ್ರಿಯೆಗಳಲ್ಲಿ ಪ್ರತಿನಿಧಿತ್ವದ ಕೊರತೆ ಮುಂತಾದ ಗಂಭೀರ ಸಮಸ್ಯೆಗಳು ಯುವಜನರಲ್ಲಿ ಹೆಚ್ಚುತ್ತಿವೆ ಎಂದು ತಿಳಿಸಿದರು.
ಈ ಹಿಂದೆ 2022ರಲ್ಲಿ ರಾಜ್ಯ ಯುವ ನೀತಿ ಇದ್ದರೂ, ಪರಿಣಾಮಕಾರಿ ಅನುಷ್ಠಾನ, ವಿವಿಧ ಇಲಾಖೆಗಳ ಯುವ ಕಾರ್ಯಕ್ರಮಗಳ ಸಮನ್ವಯ, ಯುವಜನರ ಅಹವಾಲುಗಳ ಪರಿಹಾರ ಹಾಗೂ ಸಾಕ್ಷ್ಯಾಧಾರಿತ ನೀತಿ ಶಿಫಾರಸುಗಳನ್ನು ನೀಡುವ ಕಾನೂನುಬದ್ಧ ಸಂಸ್ಥೆ ರಾಜ್ಯದಲ್ಲಿ ಪ್ರಸ್ತುತ ಇಲ್ಲ. ಇದರಿಂದ ಯುವ ಕಲ್ಯಾಣ ಕ್ಷೇತ್ರದಲ್ಲಿ ಶೂನ್ಯತೆ ಉಂಟಾಗಿದೆ.
ಕೇರಳ, ಅಸ್ಸಾಂ, ಮಿಜೋರಾಂ, ಬಿಹಾರ ಸೇರಿದಂತೆ ಹಲವು ರಾಜ್ಯಗಳಲ್ಲಿ ಈಗಾಗಲೇ ಯುವ ಆಯೋಗಗಳು ಕಾರ್ಯನಿರ್ವಹಿಸುತ್ತಿದ್ದು, ಅವು ಯುವಕಲ್ಯಾಣ, ಉದ್ಯೋಗ ಮಾರ್ಗದರ್ಶನ, ಮಾನಸಿಕ ಆರೋಗ್ಯ, ಮಾದಕ ವಸ್ತು ತಡೆ ಮತ್ತು ನಾಯಕತ್ವ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವಹಿಸುತ್ತಿವೆ. ಹೆಚ್ಚಿನ ಯುವ ಜನಸಂಖ್ಯೆ ಹೊಂದಿರುವ ರಾಜ್ಯಕ್ಕೂ ಇಂತಹ ಆಯೋಗದ ಅಗತ್ಯವಿದ್ದು, ಆಡಳಿತಾತ್ಮಕ ಮತ್ತು ಶಾಸನಾತ್ಮಕ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸುವಂತೆ ಒತ್ತಾಯಿಸಿದರು.