ಪಠ್ಯೇತರ ಚಟುವಟಿಕೆಯೂ ಮುಖ್ಯ

ಮುದಗಲ್‌ನಲ್ಲಿ ಸೋಮವಾರ ಏರ್ಪಡಿಸಿದ್ದ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ತಹಸೀಲ್ದಾರ್ ಸತ್ಯಮ್ಮ ಉದ್ಘಾಟಿಸಿದರು.
ಮುದಗಲ್‌ನಲ್ಲಿ ಸೋಮವಾರ ಏರ್ಪಡಿಸಿದ್ದ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ತಹಸೀಲ್ದಾರ್ ಸತ್ಯಮ್ಮ ಉದ್ಘಾಟಿಸಿದರು.
Published on
ಮುದಗಲ್: ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಲಿಂಗಸುಗೂರು ತಹಸೀಲ್ದಾರ್ ಸತ್ಯಮ್ಮ ಹೇಳಿದರು. 
ಪಟ್ಟಣದ ಪರಿಮಳ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ, ಸಮೂಹ ಸಂಪನ್ಮೂಲ ಕೇಂದ್ರದಿಂದ ಸೋಮವಾರ ಹಮ್ಮಿಕೊಂಡಿದ್ದ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 
ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಬೇಕು. ಅದಕ್ಕಾಗಿಯೇ ಪಾಠದ ಜತೆಗೆ ನಲಿಕಲಿ, ಪಠ್ಯೇತರ ಚಟುವಟಿಕೆಯೂ ಮುಖ್ಯ. ಶಿಕ್ಷಕರು ಕೂಡ ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು. ಅಂಕಗಳ ಜತೆಗೆ ಪ್ರತಿಭೆಗೆ ಪ್ರಾಮುಖ್ಯತೆ ಕೊಡಬೇಕು ಎಂದು ತಿಳಿಸಿದರು. 
ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತಾ ಹೂನೂರ, ಶಿಕ್ಷಕ ಬಸಪ್ಪ ಹಂದ್ರಾಳ ಮಾತನಾಡಿದರು. ಮುಖ್ಯಶಿಕ್ಷಕ ಶೇಷಗಿರಿರಾವ್ ಅಧ್ಯಕ್ಷತೆವಹಿಸಿದ್ದರು. ಪ್ರಮುಖರಾದ ಬಾಲಚಂದ್ರ ದಾಸರ, ರಮೇಶ ದೀಕ್ಷಿತ, ಸಿಆರ್‌ಪಿ ರಾಮಚಂದ್ರ ಢವಳೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net