ನಕಲಿ ಪತ್ರಕರ್ತರ ವಿರುದ್ಧ ದೂರು ನೀಡಿ

ಮಾನ್ವಿ ಪತ್ರಿಕಾ ಭವನದಲ್ಲಿ ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ ಉದ್ಘಾಟಿಸಿದರು. ಪ್ರಮುಖರಾದ ಸಿದ್ದಯ್ಯಸ್ವಾಮಿ, ಬಸವರಾಜ ನಾಗಡದಿನ್ನಿ, ಅಶೋಕ ತಡಕಲ್ ಇತರರಿದ್ದರು.
ಮಾನ್ವಿ ಪತ್ರಿಕಾ ಭವನದಲ್ಲಿ ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ ಉದ್ಘಾಟಿಸಿದರು. ಪ್ರಮುಖರಾದ ಸಿದ್ದಯ್ಯಸ್ವಾಮಿ, ಬಸವರಾಜ ನಾಗಡದಿನ್ನಿ, ಅಶೋಕ ತಡಕಲ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ನಕಲಿ
  • ಪತ್ರಕರ್ತರ
  • ಹಾವಳಿ
* ಕಾನಿಪ ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ ಹೇಳಿಕೆ
ವಿಜಯವಾಣಿ ಸುದ್ದಿಜಾಲ ಮಾನ್ವಿ
ಪತ್ರಕರ್ತರ ಹೆಸರಿಗೆ ಧಕ್ಕೆ ತರುವ ನಕಲಿ ವರದಿಗಾರ ವಿರುದ್ಧ ದೂರು ನೀಡಲು ಮುಂದಾಗಬೇಕು ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ ಹೇಳಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಮಂಗಳವಾರ ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದು ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದೆ. ಪತ್ರಕರ್ತರು ಯಾವುದೇ ಅಮಿಷಕ್ಕೆ ಒಳಗಾಗದೆ ನಿಷ್ಠೆಯಿಂದ ಕೆಲಸ ಮಾಡಬೇಕು. ಸಂಘದ ನಿಯಮಾವಳಿಗೆ ಎಲ್ಲರೂ ಬದ್ಧರಾಗಿರಬೇಕು.
ರಾಜ್ಯದಲ್ಲಿ ಪತ್ರಕರ್ತರ ಸಂಘಕ್ಕೆ ತನ್ನದೇ ಆದ ಘನತೆಯಿದೆ. ಮಾನ್ವಿಯಲ್ಲಿ ಪತ್ರಕರ್ತ ಭವನ ನಿರ್ಮಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಯ್ಯಸ್ವಾಮಿ ಕುಕನೂರು ಅವರು ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಬಸವರಾಜ ನಾಗಡದಿನ್ನಿ, ಜಿಲ್ಲಾ ಕಾರ್ಯದರ್ಶಿ ಬಸವರಾಜ ಭೋಗಾವತಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಲಕ್ಷ್ಮಣ ಕಪಗಲ್, ತಾಯಪ್ಪ ಹೊಸೂರು, ಶರಣಬಸವ ನೀರಮಾನ್ವಿ, ತಾಲೂಕು ಅಧ್ಯಕ್ಷ ಅಶೋಕ ತಡಕಲ್, ಪ್ರಧಾನ ಕಾರ್ಯದರ್ಶಿ ರವಿಕುಮಾರ, ಹಿರಿಯ ಪತ್ರಕರ್ತರಾದ ಹ್ಯಾರಿಸ್ ಕೊಟ್ನೆಕಲ್, ಪರಮೇಶ, ಸಿದ್ದರಾಮಯ್ಯಸ್ವಾಮಿ, ಮಾರೆಪ್ಪ ದೊಡ್ಡಮನಿ, ಜಿತೇಂದ್ರಸ್ವಾಮಿ, ಉಪಾಧ್ಯಕ್ಷ ಗೂಳಪ್ಪ, ದೇವು, ವಿಜಯಕುಮಾರ, ಗಯಾಸ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net