ಗಣಿ ಭಾದಿತ ಜಿಲ್ಲೆಗಳಿಗೆ ಮೊದಲ ಆದ್ಯತೆ

ರಾಯಚೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೃಷ್ಣ ಸಭಾಂಗಣದಲ್ಲಿ ಮಂಗಳವಾರ ಜನ್ಮಜಾತ ಚಯಾಪಚಯ ನ್ಯೂನ್ಯತೆಗಳನ್ನು ಪತ್ತೆ ಹಚ್ಚುವ ವಿಧಾನಗಳ ಕುರಿತು ತರಬೇತಿ ಕಾರ್ಯಾಗಾರಕ್ಕೆ ಡಿಎಚ್‌ಓ ಡಾ.ಸುರೇಂದ್ರ ಬಾಬು ಚಾಲನೆ ನೀಡಿದರು. ಜಿಲ್ಲಾ ಆರ್‌ಸಿಎಚ್  ಅಧಿಕಾರಿ ಡಾ.ನಂದಿತಾ ಎಂ.ಎನ್., ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮಹ್ಮದ್ ಶಾಕೀರ, ಯುಎನ್‌ಡಿಪಿ ರಾಕೇಶ್, ಸಿಪಿಓ ಬಸವರಾಜಪ್ಪಗೌಡ, ಎಂಎನ್‌ಡಿ ಜಿಲ್ಲಾ ವ್ಯವಸ್ಥಾಪಕ ಗುರುಗುಪ್ಪಾ  ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ನವಜಾತ ಶಿಶುವಿನಲ್ಲಿ ಚಯಾಪಚಯ ನ್ಯೂನ್ಯತೆಗಳನ್ನು ಪತ್ತೆ ಹಚ್ಚಲಾಗುವುದು: ಡಾ.ಸುರೇಂದ್ರ ಬಾಬು
ರಾಯಚೂರು ನವಜಾತ ಶಿಶುವಿನಲ್ಲಿ ಜನ್ಮಜಾತ ಚಯಾಪಚಯ ನ್ಯೂನ್ಯತೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚುವುದು ಶಿಶುವಿನ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಂತ ಅವಶ್ಯಕವಾಗಿದೆಂದುಇ ಡಿಎಚ್‌ಒ ಡಾ.ಸುರೇಂದ್ರ ಬಾಬು ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೃಷ್ಣ ಸಭಾಂಗಣದಲ್ಲಿ ಮಂಗಳವಾರ ಜನ್ಮಜಾತ ಚಯಾಪಚಯ ನ್ಯೂನ್ಯತೆಗಳನ್ನು ಪತ್ತೆ ಹಚ್ಚುವ ವಿಧಾನಗಳ ಕುರಿತು ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ನವಜಾತ ಶಿಶುಗಳಲ್ಲಿ ಆರೋಗ್ಯ ಸ್ಥಿತಿಯ ಜೈವಿಕ ಕ್ರಿಯೆಯಲ್ಲಿ (ಚಯಾಪಚಯ) ಕೆಲವು ಜನ್ಮಜಾತ ದೋಷಗಳನ್ನು ನಿರ್ಲಕ್ಷಿಸಿದರೆ ಮಗುವಿನ ಕುಂಠಿತ ಬೆಳವಣಿಗೆಗೆ ಕಾರಣವಾಗುತ್ತದೆ. ಹೆರಿಗೆ ಸಮಯದಲ್ಲಿ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಪ್ರಯೋಗಾಲಯ ಸೇವೆ ಮೂಲಕ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಸೌಲಭ್ಯವನ್ನು ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕ ಹಾಗೂ ಗಣಿ ಭಾದಿತ ಜಿಲ್ಲೆಗಳಿಗೆ ಮೊದಲ ಆಧ್ಯತೆ ನೀಡಿ ಆರಂಭಿಸಿದ್ದು, ಮಗುವಿನ ಬೆಳವಣಿಗೆಗೆ ಪೂರಕವಾದ ಈ ಸೌಲಭ್ಯವನ್ನು ಪಡೆಯಲು ಹೆಚ್ಚು ಜಾಗೃತಿ ಮೂಡಿಸಬೇಕು. ಅಲ್ಲದೆ ಸರ್ಕಾರದ ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಲು ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಬೇಕೆಂದರು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ನಂದಿತಾ ಎಂ.ಎನ್. ಮಾತನಾಡಿ, ಮಗು ಜನಿಸಿದ ತಕ್ಷಣವೇ ಕೈಗೊಳ್ಳುವ ನವಜಾತ ಶಿಶು ತಪಾಸಣೆ ಮೂಲಕ ಈ ದೋಷಗಳನ್ನು ಮೊದಲೇ ಪತ್ತೆ ಹಚ್ಚಬಹುದಾಗಿದೆ. ಥೈರಾಯಿಡ್ ಕಾಯಿಲೆಯನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿದರೆ ನಿರ್ದಿಷ್ಟ ಆಹಾರ ಪದ್ಧತಿ ಮತ್ತು ಔಷಧಿಗಳ ಮೂಲಕ ಮಗುವಿನ ಸಾಮಾನ್ಯ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಬಹುದಾಗಿದೆ. ಆಸ್ಪತ್ರೆಗೆ ಬರುವ ತಾಯಂದಿರು ಪಾಲಕರಿಗೆ ತಮ್ಮ ಮಗುವಿಗೆ ಇಂತಹ ಸಮಸ್ಯೆಗಳ ಬಗ್ಗೆ ಅನುಮಾನವಿದ್ದರೆ, ಕೂಡಲೇ ಸರ್ಕಾರಿ ಆಸ್ಪತ್ರೆಯ ಮಕ್ಕಳ ತಜ್ಞರ ಸಲಹೆಯನ್ನು ಪಡೆಬೇಕೆಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮಹ್ಮದ್ ಶಾಕೀರ, ಯುಎನ್‌ಡಿಪಿ ರಾಕೇಶ್, ಸಿಪಿಓ ಬಸವರಾಜಪ್ಪಗೌಡ, ಎಂಎನ್‌ಡಿ ಜಿಲ್ಲಾ ವ್ಯವಸ್ಥಾಪಕ ಗುರುಗುಪ್ಪಾ ಸೇರಿದಂತೆ ಅನೇಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net