ಸಾರ್ವಜನಿಕರ ಆರೋಗ್ಯದತ್ತ ಗಮನಹರಿಸಿ

ಸಿಂಧನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸಭೆಯನ್ನು ಎಂಎಲ್‌ಸಿ ಬಸನಗೌಡ ಬಾದರ್ಲಿ ನಡೆಸಿದರು. ಡಿಎಚ್‌ಒ ನಂದಿತಾ, ಆಸ್ಪತ್ರೆ ಮುಖ್ಯಾಧಿಕಾರಿ ಸುರೇಶಗೌಡ ಇದ್ದರು.
ಸಿಂಧನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸಭೆಯನ್ನು ಎಂಎಲ್‌ಸಿ ಬಸನಗೌಡ ಬಾದರ್ಲಿ ನಡೆಸಿದರು. ಡಿಎಚ್‌ಒ ನಂದಿತಾ, ಆಸ್ಪತ್ರೆ ಮುಖ್ಯಾಧಿಕಾರಿ ಸುರೇಶಗೌಡ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಆರೋಗ್ಯ
  • ಸೇವೆ
  • ಸಮಗ್ರ

ಸಿಂಧನೂರು: ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ಸಮಯೋಚಿತ ಆರೋಗ್ಯ ಸೇವೆ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಹೇಳಿದರು.

ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಯೊಂದಿಗೆ ಸೋಮವಾರ ಸಭೆ ನಡೆಸಿ, ಸಾರ್ವಜನಿಕರಿಗೆ ದೊರೆಯುತ್ತಿರುವ ಆರೋಗ್ಯ ಸೇವೆಗಳ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಿ ಮಾತನಾಡಿದರು.
ವೈದ್ಯರು ಹಾಗೂ ಸಿಬ್ಬಂದಿ ನಿಗದಿತ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಆರೋಗ್ಯ ಸೇವೆ ನೀಡಬೇಕು. ಆಸ್ಪತ್ರೆಯಲ್ಲಿ ಭ್ರಷ್ಟ್ರಾಚಾರಕ್ಕೆ ಅವಕಾಶ ನೀಡದೆ, ಭ್ರಷ್ಟ್ಟಾಚಾರ ಮುಕ್ತ ಹಾಗೂ ಪಾರದರ್ಶಕ ಸೇವೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಆಸ್ಪತ್ರೆಯಲ್ಲಿ ಅಗತ್ಯ ಔಷಧಗಳ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ, ಔಷಧಗಳ ಲಭ್ಯತೆ ಕುರಿತು ನಿರಂತರ ನಿಗಾ ವಹಿಸಬೇಕು. ಸಿಬ್ಬಂದಿ ಕೊರತೆಯಿಂದ ಸಾರ್ವಜನಿಕರಿಗೆ ಹಾಗೂ ರೋಗಿಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಂಡು, ಸಿಬ್ಬಂದಿ ಕೊರತೆ ಸರಿಪಡಿಸುವಂತೆ ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net