ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದ ಸಾನಿಧ್ಯವನ್ನು ಇಲಕಲ್ ಚಿತ್ತರಗಿ ಸಂಸ್ಥಾನ ಮಠದ ಶ್ರೀ ಗುರು ಮಹಾಂತಸ್ವಾಮಿಗಳು ಮತ್ತು ಚೌಕಿಮಠದ ಡಾ.ಸಿದ್ದಲಿಂಗ ಮಹಾಸ್ವಾಮಿಗಳು ವಹಿಸಲಿದ್ದಾರೆ. ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ನಗರ ಶಾಸಕ ಡಾ.ಶಿವರಾಜ ಪಾಟೀಲ್ ವಹಿಸಲಿದ್ದಾರೆ.
ಅತಿಥಿಗಳಾಗಿ ಶಿಲ್ಪಾ ಮೆಡಿಕೇರ ಸಂಸ್ಥಾಪಕ ವಿಷ್ಣುಕಾಂತ ಬೂತಡಾ, ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಚಂದ್ರಶೇಖರ ಪಾಟೀಲ್ ಮಿರ್ಜಾಪುರು, ಪಾಲಿಕೆ ಸದಸ್ಯ ಜಯಣ್ಣ, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಕೆ.ಶಾಂತಪ್ಪ, ರವೀಂದ್ರ ಜಲ್ದಾರ, ಪಾಲಿಕೆ ಸದಸ್ಯ ಎನ್. ಕೆ.ನಾಗರಾಜ, ಸಾಹಿತ್ಯ ಪರಿಷತ್ ಅಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದರು.