ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಕುರಿತ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು. ಸಂಚಾರ ಸಂದರ್ಭದಲ್ಲಿ ಯಾರು ಕಾನೂನು ಉಲ್ಲಂಘಿಸಬಾರದು. ಅಪ್ರಾಪ್ತರು ಹೆಚ್ಚಾಗಿ ಬೈಕ್ ಓಡಿಸುತ್ತಿರುವುದು ಕಂಡು ಬಂದಿದೆ. ಇದರಿಂದ ಅಪಘಾತಗಳು ಹೆಚ್ಚಾಗಲು ಕಾರಣವಾಗಿದೆ. ಕಳೆದ ಎರಡು ದಿನಗಳಲ್ಲಿ ಸಂಚಾರಿ ನಿಯಮ ಪಾಲಿಸದ 150 ಕ್ಕೂ ಹೆಚ್ಚು ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸವಾರರು ಹೆಲ್ಮೆಟ್ ಕಡ್ಡಾಯವಾಗಿ ಹಾಕಿಕೊಳ್ಳಬೇಕೆಂದರು.