ಜಿಲ್ಲೆಯ ನಾಲ್ಕು ಜನರಿಗೆ ಸಚಿವ ಸ್ಥಾನ ನೀಡಲಿ

LAXMI-REDDY
LAXMI-REDDY
Published on
ರಾಯಚೂರು ಸಚಿವ ಸಂಪುಟದಲ್ಲಿ ಜಿಲ್ಲೆಯ ನಾಲ್ಕು ಜನರಿಗೆ ಸಚಿವ ಸ್ಥಾನನೀಡುವ ಮೂಲಕ ಮಹತ್ವಾಂಕ್ಷೆ ಜಿಲ್ಲೆ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕೆಂದು ನಗರ ಬ್ಲಾಕ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ವಿ.ಲಕ್ಷ್ಮೀರೆಡ್ಡಿ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ 50 ವರ್ಷಗಳಿಂದ ಪಕ್ಷದ ಸಂಘಟನೆ, ಅಪಾರ ರಾಜಕೀಯ ಅನುಭವ ಹೊಂದಿರುವ ಎನ್.ಎಸ್.ಬೋಸರಾಜರಿಗೆ ಸಚಿವ ಸ್ಥಾನ ನೀಡಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಬೇಕು. ಜತೆಗೆ ಎಂಎಲ್ಸಿ ಎ.ವಸಂತಕುಮಾರ ಆರ್‌ಡಿಎ ಅಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಅನುಭವ ಹೊಂದಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಿದಲ್ಲಿ 2028 ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವಿಗೆ ಸಹಕಾರಿಯಾಗುತ್ತದೆ.
ಜಿಲ್ಲೆಯ ಅನುಭವಿ ರಾಜಕಾರಣಿಗಳಿಗೆ ಸಚಿವ ಸ್ಥಾನ ನೀಡುವಂತೆ ಎಐಸಿಸಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಒತ್ತಾಯಿಸಲಾಗಿದೆ. ಈ ಹಿಂದೆ ಕಲಬುರಗಿ ಜಿಲ್ಲೆಯ ಐದು ಸ್ಥಾನ ನೀಡಿರುವ ನಿದರ್ಶನವಿದೆ. ಒಂದು ಬಾರಿ ಜಿಲ್ಲೆಗೆ ನಾಲ್ಕು ಸಚಿವ ನೀಡಿದರೆ ತಪ್ಪಿಲ್ಲ. ಅನೇಕರು ಭಿನ್ನ ಅಭಿಪ್ರಾಯಗಳಿರುವದು ಸಹಜ. ಆದರೆ ಪಕ್ಷದ ಸಂಘಟನೆ, ಅಭಿವೃದ್ಧಿ ಎರಡನ್ನು ಸಮತೂಗಿಸಿಕೊಂಡು ಹೋಗಬೇಕಾದ ಅಗತ್ಯವಿರುವದಿರಂದ ಸಚಿವ ಸ್ಥಾನ ನೀಡುವಾಗ ಅನುಭವಿಗಳಿಗೆ ಒತ್ತು ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ಉಟ್ಕೂರು ಕೃಷ್ಣಮೂರ್ತಿ, ದೇವೆಂದ್ರ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net