ತಜ್ಞ ವೈದ್ಯಾಧಿಕಾರಿಗಳ ಕೊರತೆ ನೀಗಿಸಿ

ಲಿಂಗಸುಗೂರಿನಲ್ಲಿ ಕೇಂದ್ರ ವಾಣಿಜ್ಯ ಇಲಾಖೆ ಜಂಟಿ ಕಾರ್ಯದರ್ಶಿ ಉಜ್ವಲಕುಮಾರ ಘೋಷ್ ಅವರಿಗೆ ಕರವೇ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಮನವಿಪತ್ರ ಸಲ್ಲಿಸಿದರು.
ಲಿಂಗಸುಗೂರಿನಲ್ಲಿ ಕೇಂದ್ರ ವಾಣಿಜ್ಯ ಇಲಾಖೆ ಜಂಟಿ ಕಾರ್ಯದರ್ಶಿ ಉಜ್ವಲಕುಮಾರ ಘೋಷ್ ಅವರಿಗೆ ಕರವೇ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಮನವಿಪತ್ರ ಸಲ್ಲಿಸಿದರು.
Published on
ಲಿಂಗಸುಗೂರು: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತಜ್ಞ ವೈದ್ಯರ ನಿಯೋಜನೆ ಮಾಡಬೇಕೆಂದು ಒತ್ತಾಯಿಸಿ ಕೇಂದ್ರ ವಾಣಿಜ್ಯ ಇಲಾಖೆ ಜಂಟಿ ಕಾರ್ಯದರ್ಶಿ ಉಜ್ವಲ್ ಕುಮಾರ್ ಘೋಷ್ ಅವರಿಗೆ ಕರವೇ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಸೋಮವಾರ ಮನವಿ ಸಲ್ಲಿಸಿದರು.
ಸುರಪುರ, ಹುಣಸಗಿ, ಅರಕೇರಾ ಸೇರಿದಂತೆ ವಿವಿಧೆಡೆಯಿಂದ ಚಿಕಿತ್ಸೆ ಪಡೆಯಲು ಜನರು ಬರುತ್ತಾರೆ. ಆದರೆ, ಆಸ್ಪತ್ರೆಯಲ್ಲಿ ತಜ್ಞ ವೈದ್ಯಾಧಿಕಾರಿಗಳ ಕೊರತೆ ಇದೆ. ಚರ್ಮರೋಗ, ಕಿವಿ, ಮೂಗು, ಗಂಟಲು ತಜ್ಞರನ್ನು ನೇಮಕ ಮಾಡಬೇಕು. ಕಟ್ಟಡ ಕಾಮಗಾರಿ ಪೂರ್ಣಗೊಂಡಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಅನುಕೂಲ ಮಾಡಿಕೊಡಬೇಕು. ಕ್ರಿಟಿಕಲ್ ಕೇರ್ ಸೆಂಟರ್ ಕಟ್ಟಡವನ್ನು ಸಾರ್ವಜನಿಕ ಆಸ್ಪತ್ರೆಯ ಹತ್ತಿರ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿದರು.
ಅಧ್ಯಕ್ಷ ಜಿಲಾನಿ ಪಾಷಾ, ರವಿಕುಮಾರ ಬರಗೋಡಿ, ರಹೀಂ, ಮಲ್ಲನಗೌಡ, ಇಲಿಯಾಸ್, ಆರೀಫ್, ಬಸವರಾಜ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net