ಜಾಲಹಳ್ಳಿಯ ಕನ್ಯಾ ಸರ್ಕಾರಿ ಪ್ರಾಥಮಿಕ ಶಾಲೆಯ ಕಿಶೋರ ಕೇಂದ್ರಕ್ಕೆ ಬುಧವಾರ ಭೇಟಿನೀಡಿ ಪರಿಶೀಲಿಸಿ ಮಾತನಾಡಿದರು. ನಿತ್ಯ ಎಷ್ಟು ಮಕ್ಕಳು ಬರುತ್ತಾರೆ ? ಅವರಿಗೆ ವಿತರಿಸುವ ಪೌಷ್ಟಿಕ ಆಹಾರ, ಆರೋಗ್ಯದ ಬಗ್ಗೆ ವಿಶೇಷ ಕಾಳಜಿವಹಿಸಬೇಕು. ಪ್ರತಿಯೊಂದು ಮಗುವಿನ ವೈಯಕ್ತಿಕ ಬೆಳವಣಿಗೆಗೆ ಆದ್ಯತೆ ನೀಡಬೇಕು. ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತೆ ಹಾಗೂ ಸುರಕ್ಷತೆಗೆ ಖಾತ್ರಿಪಡಿಸಿಕೊಳ್ಳಬೇಕು. ಶುದ್ಧ ಕುಡಿವ ನೀರು, ಪೌಷ್ಟಿಕ ಆಹಾರ ವಿತರಣೆ ಮಾಡುವ ಜತೆಗೆ ಗುಣಮಟ್ಟದ ಆಟಿಕೆ ವಸ್ತುಗಳನ್ನು ನೀಡಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯವಹಿಸಬೇಡಿ ಎಂದು ತಾಕೀತು ಮಾಡಿದರು. ಕೆಲಕಾಲ ಮಕ್ಕಳ ಜತೆ ಕಾಲಕಳೆದರು.