ಮೂಲಸೌಕರ್ಯಕ್ಕೆ ಮೊದಲ ಆದ್ಯತೆ ನೀಡಿ

ಮಸ್ಕಿಯಲ್ಲಿ ಪುರಸಭೆ ಅಧ್ಯಕ್ಷ ಸುರೇಶ ಹರಸೂರು ಅಧ್ಯಕ್ಷತೆಯಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಯಿತು. ಉಪಾಧ್ಯಕ್ಷೆ ಗೀತಾ ಶಿವರಾಜ ಬುಕ್ಕಣ್ಣ, ಮುಖ್ಯಾಧಿಕಾರಿ ನರಸರಡ್ಡಿ, ಸ್ಥಾಯಿ ಸಮಿತಿ ಅಧ್ಯಕ್ಷ ಚೇತನ್ ಪಾಟೀಲ್ ಇದ್ದರು.
ಮಸ್ಕಿಯಲ್ಲಿ ಪುರಸಭೆ ಅಧ್ಯಕ್ಷ ಸುರೇಶ ಹರಸೂರು ಅಧ್ಯಕ್ಷತೆಯಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಯಿತು. ಉಪಾಧ್ಯಕ್ಷೆ ಗೀತಾ ಶಿವರಾಜ ಬುಕ್ಕಣ್ಣ, ಮುಖ್ಯಾಧಿಕಾರಿ ನರಸರಡ್ಡಿ, ಸ್ಥಾಯಿ ಸಮಿತಿ ಅಧ್ಯಕ್ಷ ಚೇತನ್ ಪಾಟೀಲ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಾರ್ವಜನಿಕರ ಅಭಿಪ್ರಾಯ ಸಲಹೆ
  • ಮಸ್ಕಿ ಪುರಸಭೆ ಬಜೆಟ್ ಪೂರ್ವಭಾವಿ ಸಭೆ
ಮಸ್ಕಿ: ಪಟ್ಟಣದ ಪುರಸಭೆಯಲ್ಲಿ ಬುಧವಾರ ಅಧ್ಯಕ್ಷ ಸುರೇಶ ಹರಸೂರು ಅಧ್ಯಕ್ಷತೆಯಲ್ಲಿ ಏರ್ಪಡಿಸಿದ್ದ 2026-27ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಲಾಯಿತು.
ಪಟ್ಟಣದಲ್ಲಿ ಮೂಲಸೌಕರ್ಯ ಒದಗಿಸಲು, ಹಳೇ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ತಂಗು ದಾಣವಿಲ್ಲದೆ ಮಹಿಳೆಯರಿಗೆ ಆಗುತ್ತಿರುವ ತೊಂದರೆ ಕುರಿತು ಸಾರ್ವಜನಿಕರು ಪ್ರಸ್ತಾಪಿಸಿದರು. ಅಶೋಕ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ನಡೆದ ಜಲಧಾರೆ ಹಾಗೂ ಅಮೃತ 2.0 ಯೋಜನೆಯ ಕುಡಿವ ನೀರು ಸರಬರಾಜು ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಬೇಕು.
ರಸ್ತೆಗಳ ದುರಸ್ತಿ ಹಾಗೂ ಚರಂಡಿಗಳ ಸ್ವಚ್ಛತೆ ಕೈಗೊಳ್ಳಬೇಕು. 23ನೇ ವಾರ್ಡ್ ರಸ್ತೆಗೆ ಡಾಂಬರೀಕರಣ ಮಾಡುವುದು, ಸ್ಮಶಾನಗಳಿಗೆ ತೆರಳುವ ಮಾರ್ಗದಲ್ಲಿ ಬೀದಿ ದೀ ಅಳವಡಿಸುವುದು, ಕುಡಿವ ನೀರಿನ ಸೌಕರ್ಯ ಕಲ್ಪಿಸಬೇಕು ಎಂದು ವಿವಿಧ ವಾರ್ಡ್‌ಗಳ ನಿವಾಸಿಗಳು ಆಗ್ರಹಿಸಿದರು.
ಸದಸ್ಯೆ ರೇಣುಕಮ್ಮ ಮಾತನಾಡಿ, ಪಟ್ಟಣದ 17 ಮತ್ತು 19ನೇ ವಾರ್ಡ್‌ಗಳಲ್ಲಿ ಸಾರ್ವಜನಿಕ ಶೌಚಗೃಹ ನಿರ್ಮಿಸಲು ಮನವಿ ಮಾಡಿದರು. ಪಟ್ಟಣದ ನಿವಾಸಿ ಡಾ.ಮಲ್ಲಿಕಾರ್ಜುನ ಇತ್ಲಿ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಕ್ರಮಕ್ಕೆ ಅನುಕೂಲವಾಗುವಂತೆ ಅನುದಾನ ಒದಗಿಸಬೇಕು. ರಸ್ತೆ ಬದಿಯಲ್ಲಿ ಚಿಕನ್ ಹಾಗೂ ಮಟನ್ ಅಂಗಡಿಗಳ ಮಾಲೀಕರು ಸ್ವಚ್ಛತೆ ಕಾಪಾಡಿಕೊಳ್ಳಲು ಅಧಿಕಾರಿಗಳು ಸೂಚಿಸಬೇಕು. ತ್ಯಾಜ್ಯ ವಸ್ತುಗಳನ್ನು ಹಳ್ಳಕ್ಕೆ ಎಸೆಯದಂತೆ ಕ್ರಮವಹಿಸಬೇಕು ಎಂದು ಸಲಹೆ ನೀಡಿದರು.
ಅಧ್ಯಕ್ಷ ಸುರೇಶ ಹರಸೂರು ಪ್ರತಿಕ್ರಿಯಿಸಿ, ಗ್ರಾಮದ ಸ್ವಚ್ಛತೆ ಹಾಗೂ ಅಭಿವೃದ್ಧಿಗಾಗಿ ಉತ್ತಮ ಸಲಹೆಗಳು ಬಂದಿದ್ದು ಪುರಸಭೆಯಿಂದ ಮೂಲಸೌಕರ್ಯಕ್ಕೆ ಮೊದಲ ಆದ್ಯತೆ ನೀಡುವುದಾಗಿ ತಿಳಿಸಿದರು.
ಉಪಾಧ್ಯಕ್ಷೆ ಗೀತಾ ಶಿವರಾಜ ಬುಕ್ಕಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ಚೇತನ್ ಪಾಟೀಲ್, ಮುಖ್ಯಾಧಿಕಾರಿ ನರಸರಡ್ಡಿ, ವಿವಿಧ ವಾರ್ಡ್ ನಿವಾಸಿಗಳಾದ ವೀರಭದ್ರ ಕೊಠಾರಿ, ಪದ್ಮಾ, ಮಸೂದ್ ಪಾಷಾ, ಪುರಸಭೆ ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net