ಭರವಸೆಯಂತೆ ವೇತನ ಹೆಚ್ಚಳ ಮಾಡಿ

ಸಿಂಧನೂರಿನಲ್ಲಿ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಸಾಬಣ್ಣ ವಗ್ಗರಿಗೆ ಬಿಸಿಯೂಟ ನೌಕರರ ಸಂಘದ ತಾಲೂಕು ಘಟಕ ಮನವಿ ಸಲ್ಲಿಸಿತು.
ಸಿಂಧನೂರಿನಲ್ಲಿ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಸಾಬಣ್ಣ ವಗ್ಗರಿಗೆ ಬಿಸಿಯೂಟ ನೌಕರರ ಸಂಘದ ತಾಲೂಕು ಘಟಕ ಮನವಿ ಸಲ್ಲಿಸಿತು.
Published on
ಸಿಂಧನೂರು: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬಿಸಿಯೂಟ ನೌಕರರ ಸಂಘದ ತಾಲೂಕು ಘಟಕದಿಂದ ಸೋಮವಾರ ತಾಪಂ ಕಚೇರಿ ಮುಂದೆ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಸಾಬಣ್ಣ ವಗ್ಗರಿಗೆ ಮನವಿ ಸಲ್ಲಿಸಲಾಯಿತು.
ಕೇಂದ್ರ ಸರ್ಕಾರ 2008ರಿಂದ ಬಡ ಮಹಿಳೆಯರಿಗೆ ವೇತನ ಹೆಚ್ಚಳ ಮಾಡದೆ ಶೋಷಣೆ ಮಾಡುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟ ಆಶ್ವಾಸನೆಯಂತೆ ಬಿಸಿಯೂಟ ನೌಕರರಿಗೆ 7 ಸಾವಿರ ರೂ. ವೇತನ ಹೆಚ್ಚಳ ಮಾಡಬೇಕು.
ಇಸ್ಕಾನ್‌ಗೆ ಬಿಸಿಯೂಟ ಯೋಜನೆಯನ್ನು ಕೊಡುವ ಪ್ರಸ್ತಾಪ ಕೈಬಿಡಬೇಕು. ಜು. 10ರಂದು ಕಪ್ಪು ದಿನ ಆಚರಿಸಲು ರಾಜ್ಯಾದ್ಯಂತ ಬಿಸಿಯೂಟ ಬಂದ್ ಮಾಡಿ ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. 
ಹೋರಾಟಕ್ಕೆ ಸರ್ಕಾರಗಳು ಸ್ಪಂದನೆ ನೀಡಬೇಕು ಎಂದು ಒತ್ತಾಯಿಸಿದರು.  ಸಂಘದ ಅಧ್ಯಕ್ಷೆ ಗೌರಮ್ಮ, ಸದಸ್ಯರಾದ ಶರಣಮ್ಮ ಪಾಟೀಲ್, ಕೆ.ರೇಣುಕಮ್ಮ, ವಿಶಾಲಾಕ್ಷಿ, ಶೇಖಮ್ಮ, ಅನಸೂಯಾ, ಪಾರ್ವತಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net