ಜು.18 ರಂದು ಬೆಳಗ್ಗೆ ಗೋ ಪೂಜೆ, ಅಭಿಷೇಕ, ಗಣಪತಿ ಹೋಮ, ಆವಂತಿ ಹೋಮ ನಂತರ ಮಹಿಳೆಯರಿಂದ ಕುಂಕುಮಾರ್ಚನೆ ಸಂಜೆ 6.30ಕ್ಕೆ ಶ್ರೀಗಳಿಂದ ಪ್ರವಚನ ಕಾರ್ಯಕ್ರಮ ನಡೆಯಲಿದೆ. ಜು.19 ರಂದು ಬೆಳಗ್ಗೆ ಶ್ರೀ ಕನ್ನಿಕಾಪರಮೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ, ಶ್ರೀಗಳಿಗೆ ಪುಷ್ಪಾಭಿಷೇಕ ಕಾರ್ಯಕ್ರಮಗಳು ನಡೆಯಲಿದ್ದು ಆರ್ಯವೈಶ್ಯ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.