ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ನೀಡಲಿ

ಅಶೋಕ ಪಾಟೀಲ್ ಅತ್ತನೂರು
ಅಶೋಕ ಪಾಟೀಲ್ ಅತ್ತನೂರು
Published on
ರಾಯಚೂರು ರಾಜ್ಯ ಸಚಿವ ಸಂಪುಟದ ಮುಂಬರುವ ವಿಸ್ತರಣೆಯ ಸಂದರ್ಭದಲ್ಲಿ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ನೀಡಬೇಕೆಂದು ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಉಪಾಧ್ಯಕ್ಷ ಅಶೋಕ ಪಾಟೀಲ್ ಅತ್ತನೂರು ಒತ್ತಾಯಿಸಿಸಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಾಸಕ ಹಂಪನಗೌಡ ಬಾದರ್ಲಿಯವರು ಕಳೆದ ನಾಲ್ಕು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದಾರೆ. ಐದು ಬಾರಿ ಶಾಸಕರಾಗಿಆಯ್ಕೆಯಾದ ಅನುಭವ ಹೊಂದಿದ್ದಾರೆ. ಅವರ ಸುದೀರ್ಘ ರಾಜಕೀಯ ಪಯಣ, ಪಕ್ಷದ ಮೇಲಿರುವ ನಿಷ್ಠೆ ಹಾಗೂ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆಗಳನ್ನು ಪರಿಗಣಿಸಿ ಈ ಬಾರಿ ಅವರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕು.
ಆದರಿಂದ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಅವರ ಹಿರಿತನವನ್ನು ಗೌರವಿಸಿ ತಕ್ಷಣವೇ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಹರವಿ ನಾಗನಗೌಡ, ಶಿವಾನಂದ ಚುಕ್ಕಿ ,ಟಿ.ಬಸವರಾಜ ,ಅರಳಿ ಶರಣಬಸವ, ಚನ್ನಬಸವ ,ಆನಂದ ಪಾಟೀಲ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net