ಬೀದಿ ನಾಟಕ ಪ್ರದರ್ಶಿಸಿ ಆರೋಗ್ಯ ಜಾಗೃತಿ

ಸಿಂಧನೂರಿನ ಬಸ್ ನಿಲ್ದಾಣದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಬೀದಿ ನಾಟಕ ಪ್ರದರ್ಶನ ಮೂಲಕ ಆರೋಗ್ಯ ಜಾಗೃತಿ ಮೂಡಿಸಲಾಯಿತು.
ಸಿಂಧನೂರಿನ ಬಸ್ ನಿಲ್ದಾಣದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಬೀದಿ ನಾಟಕ ಪ್ರದರ್ಶನ ಮೂಲಕ ಆರೋಗ್ಯ ಜಾಗೃತಿ ಮೂಡಿಸಲಾಯಿತು.
Published on
ಸಿಂಧನೂರು: ನಗರದ ಬಸ್ ನಿಲ್ದಾಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆ, ಸಮನ್ವಯ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ಸಂತೆಕೆಲ್ಲೂರು ಹಾಗೂ ಟಿಎಚ್‌ಒ ಕಚೇರಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಬೀದಿ ನಾಟಕ ಪ್ರದರ್ಶನ ಮೂಲಕ ಆರೋಗ್ಯ ಜಾಗೃತಿ ಮೂಡಿಸಲಾಯಿತು. 
ಸಾಂಕ್ರಾಮಿಕ ರೋಗಗಳು ಹರಡುವುದು, ತಡೆಗಟ್ಟುವುದು, ಸೂಕ್ತ ಚಿಕಿತ್ಸೆ ಪಡೆಯುವುದು ಹೇಗೆ ಎಂಬುದರ ಬಗ್ಗೆ ಕಲಾ ಪ್ರದರ್ಶನದ ಮೂಲಕ ಸಾರ್ವಜನಿಕರಿಗೆ ತಿಳಿಸಲಾಯಿತು. ಜತೆಗೆ ಡಾ.ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಚಿಕಿತ್ಸಾ ಸೌಲಭ್ಯ ಕುರಿತು ಅರಿವು ಮೂಡಿಸಲಾಯಿತು. 
ಟಿಎಚ್‌ಒ ಕಚೇರಿ ಶಿಕ್ಷಣಾಧಿಕಾರಿ ಗೀತಾ ಹಿರೇಮಠ, ಸಂತೆಕೆಲ್ಲೂರು ಸಮನ್ವಯ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಕಲಾ ತಂಡದ ಮುಖ್ಯಸ್ಥ ಉಮಾಪತಿ ಕನ್ನಾರಿ, ನಾಗಯ್ಯಸ್ವಾಮಿ, ಬೆಟ್ಟಪ್ಪ, ಬಸವರಾಜ, ನಿರುಪಾದಿ ನಾಯಕ, ವಿರೂಪಾಕ್ಷಿ, ಮಮತಮ್ಮ, ಗೌರವಮ್ಮ, ಸರಸ್ವತಿ, ಅನುಪಮಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net