ಪರಿಣಾಮಕಾರಿ ಬೋಧನೆಗೆ ಸಹಕಾರಿ

ಹೂವಿನಹಡಗಲಿಯಲ್ಲಿ ಹಮ್ಮಿಕೊಂಡಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆ ಕಾರ್ಯಕ್ರಮವನ್ನು ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ ಉದ್ಘಾಟಿಸಿದರು. ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಬಿ.ಜಗದೀಶ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯ ಸಹ ಕಾರ್ಯದರ್ಶಿ ಗಡ್ಡಿ ಶಿವಕುಮಾರ್, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಕೆ.ಜಗದೀಶ್ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ ಸಲಹೆ
  • ಪರಿಣಾಮಕಾರಿ ಬೋಧನೆ
  • ಸಹಕಾರಿ
  • ಪಠ್ಯ ಚಟುವಟಿಕೆಗಳ ಸ್ಪರ್ಧೆ

ಪರಿಣಾಮಕಾರಿ ಬೋಧನೆಗೆ ಸಹಕಾರಿ

ಹೂವಿನಹಡಗಲಿ: ಶಿಕ್ಷಕರು ಬೋಧನಾ ಕೌಶಲಗಳನ್ನು ಅಭಿವೃದ್ಧಿ ಪಡೆಸಿಕೊಳ್ಳುವ ಅನಿವಾರ್ಯತೆ ಇದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ ಹೇಳಿದರು.
ಪಟ್ಟಣದಲ್ಲಿ ಲಿಟಲ್ ಚಾಂಪ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಯಾಲಯ, ಶಿಕ್ಷಕರ ಕಲ್ಯಾಣ ನಿಧಿಯಿಂದ ಶನಿವಾರ ಹಮ್ಮಿಕೊಂಡಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹ ಪಠ್ಯ ಚಟುವಟಿಕೆಗಳು ಪೂರಕವಾಗಿವೆ. ಶಿಕ್ಷಕರು ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ವಿವಿಧ ವಿಷಯಗಳ ಪರಿಣಾಮಕಾರಿ ಬೋಧನೆಗೆ ಸಹಕಾರಿಯಾಗಲಿದೆ ಎಂದರು.
ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಬಿ.ಜಗದೀಶ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯ ಸಹ ಕಾರ್ಯದರ್ಶಿ ಗಡ್ಡಿ ಶಿವಕುಮಾರ್, ತಾಲೂಕು ದೈಹಿಕ ಪರಿವೀಕ್ಷಕ ರಫಿ ಅಹಮದ್ ಖವಾಸ್, ಬಡ್ತಿ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಶೇಕ್ ಅಹಮದ್, ತಾಲೂಕು ಪ್ರೌಢಶಾಲಾ ಮುಖ್ಯಗುರುಗಳ ಸಂಘದ ಅಧ್ಯಕ್ಷ ಜಿ.ಎಂ.ಕಾಂತೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ವಿ.ಎಚ್.ಯೇಸು, ಕೋಶಾಧಿಕಾರಿ ಫಕ್ಕೀರಸಾಬ್, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಕೆ.ಜಗದೀಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net