ಮಕ್ಕಳ ಪ್ರತಿಭೆ ಗುರುತಿಸಲು ಸಹಕಾರಿ

ಮಾನ್ವಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಮಾರುತಿ ಉದ್ಘಾಟಿಸಿದರು. ಪ್ರಮುಖರಾದ ಸಂಗಮೇಶ ಮುಧೋಳ್, ಶ್ರೀನಿವಾಸ, ವೀರಭದ್ರಗೌಡ,  ಹಂಪಣ್ಣ ಚಂಡೂರ ಇತರರಿದ್ದರು.
ಮಾನ್ವಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಮಾರುತಿ ಉದ್ಘಾಟಿಸಿದರು. ಪ್ರಮುಖರಾದ ಸಂಗಮೇಶ ಮುಧೋಳ್, ಶ್ರೀನಿವಾಸ, ವೀರಭದ್ರಗೌಡ, ಹಂಪಣ್ಣ ಚಂಡೂರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರತಿಭಾ ಕಾರಂಜಿ
  • ಕಲೋತ್ಸವ
  • ವಿದ್ಯಾರ್ಥಿಗಳ ಪ್ರತಿಭೆ

ಮಕ್ಕಳ ಪ್ರತಿಭೆ ಗುರುತಿಸಲು ಸಹಕಾರಿ

ಮಾನ್ವಿ: ಪಠ್ಯದ ಜತೆ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿಲು ಪ್ರತಿಭಾ ಕಾರಂಜಿ ಅವಶ್ಯಕ ಎಂದು ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಮಾರುತಿ ಹೇಳಿದರು.
ಇಲ್ಲಿನ ಕಾಕತೀಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಮಂಗಳವಾರ ತಾಲೂಕು ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಕ್ಕಳ ಪ್ರತಿಭೆ ಗುರುತಿಸುವ ಉದ್ದೇಶದಿಂದ ಶಾಲಾ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಮಕ್ಕಳ ಪ್ರತಿಭೆ ಅನಾವರಣಗೊಳಿಸಲು ಮುಂದಾಗಿದೆ. ಶಿಕ್ಷಕರು ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಮಾರ್ಗದರ್ಶನ ನೀಡಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಸಂಗಮೇಶ ಮುಧೋಳ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸುರೇಶ ಕುರ್ಡಿ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಅಶೋಕ ಕುಮಾರ, ಕಾಕತೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀನಿವಾಸ, ಮುಖ್ಯಶಿಕ್ಷಕ ವೀರಭದ್ರಗೌಡ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net