ಹೇಮರೆಡ್ಡಿ ಮಲ್ಲಮ್ಮ ಜಯಂತಿ ಪೂರ್ವಭಾವಿ ಸಭೆ ಅರ್ಥಪೂರ್ಣ ಆಚರಣೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ

ರಾಯಚೂರಿನ ಜಿಲ್ಲಾಧಿಕಾರಿಗಳ ಭವನದಲ್ಲಿ ಗುರುವಾರ ಎಡಿಸಿ ಶಿವಾನಂದ ಅಧ್ಯಕ್ಷತೆಯಲ್ಲಿ  ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಪೂರ್ವಭಾವಿ ಸಭೆ ನಡೆಯಿತು. ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ  ಡಾ.ಬಸನಗೌಡ, ತಾಲೂಕು ಅಧ್ಯಕ್ಷ ರಾಮನಗೌಡ ಏಗನೂರು, ಚಂದ್ರಶೇಖರ ಮಿರ್ಜಾಪುರ, ವಸಂತ ರೆಡ್ಡಿ, ನವೀನ್ ಕುಮಾರ್, ವಿರುಪಣ್ಣ ಚೌಧರಿ, ಜಿ.ಎಸ್.ರಾಮನಗೌಡ, ಸುರೇಶ, ಪರಮೇಶ್ವರ ಇದ್ದರು.
ರಾಯಚೂರಿನ ಜಿಲ್ಲಾಧಿಕಾರಿಗಳ ಭವನದಲ್ಲಿ ಗುರುವಾರ ಎಡಿಸಿ ಶಿವಾನಂದ ಅಧ್ಯಕ್ಷತೆಯಲ್ಲಿ ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಪೂರ್ವಭಾವಿ ಸಭೆ ನಡೆಯಿತು. ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಡಾ.ಬಸನಗೌಡ, ತಾಲೂಕು ಅಧ್ಯಕ್ಷ ರಾಮನಗೌಡ ಏಗನೂರು, ಚಂದ್ರಶೇಖರ ಮಿರ್ಜಾಪುರ, ವಸಂತ ರೆಡ್ಡಿ, ನವೀನ್ ಕುಮಾರ್, ವಿರುಪಣ್ಣ ಚೌಧರಿ, ಜಿ.ಎಸ್.ರಾಮನಗೌಡ, ಸುರೇಶ, ಪರಮೇಶ್ವರ ಇದ್ದರು.
Published on
ರಾಯಚೂರು ಹೇಮರೆಡ್ಡಿ ಮಲ್ಲಮ್ಮ ಜಯಂತಿ ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಭವನದಲ್ಲಿ ಗುರುವಾರ ಹಮ್ಮಿಕೊಂಡ ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೇಮರೆಡ್ಡಿ ಮಲ್ಲಮ್ಮ ಜಯಂತಿ ಮೇ.10ರಂದು ಆಚರಣೆ ಮಾಡಲಾಗುವುದು. ಜಯಂತಿ ದಿನದಂದು ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿ, ತಾಲೂಕು ಕೇಂದ್ರಗಳಲ್ಲಿ ಮತ್ತು ತಾಲೂಕು ಕಚೇರಿ, ಗ್ರಾಮ ಪಂಚಾಯತ್, ಶಾಲಾ, ಕಾಲೇಜು ಹಾಗೂ ವಸತಿ ನಿಲಯಗಳಲ್ಲಿ ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಡ್ಡಾಯವಾಗಿ ಆಚರಣೆ ಮಾಡಬೇಕಾಗಿದ್ದು, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.
ಜಿಲ್ಲಾ ಕೇಂದ್ರದಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಗಾಗಿ ಸಂಬಅಧಿಸಿದ ಇಲಾಖೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು. ಮೇ 10ರ ಬೆಳಗ್ಗೆ 10 ಗಂಟೆಗೆ ನಗರದ ಪಂಡಿತ ಸಿದ್ಧರಾಮ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಜಯಂತಿ ಆಚರಣೆಗೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು. ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳ ಸಹಕಾರವೂ ಅಗತ್ಯವಿದ್ದು, ಜಿಲ್ಲಾಡಳಿತದೊಂದಿಗೆ ಸಹಕರಿಸಿ ವ್ಯವಸ್ಥಿತ ಜಯಂತಿ ಆಚರಣೆಗೆ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದರು.
ಈ ಸಂದರ್ಭದಲ್ಲಿ ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಡಾ.ಬಸನಗೌಡ, ತಾಲೂಕು ಅಧ್ಯಕ್ಷ ರಾಮನಗೌಡ ಏಗನೂರು, ಚಂದ್ರಶೇಖರ ಮಿರ್ಜಾಪುರ, ವಸಂತ ರೆಡ್ಡಿ, ನವೀನ್ ಕುಮಾರ್, ವಿರುಪಣ್ಣ ಚೌಧರಿ, ಜಿ.ಎಸ್.ರಾಮನಗೌಡ, ಸುರೇಶ, ಪರಮೇಶ್ವರ ಸೇರಿದಂತೆ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net