ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲು ಸಾಧ್ಯತೆ: ಡಿಸಿ ಸಲಹೆ

ಡಿಸಿ ಪುವಿತಾ ಎಸ್
ಡಿಸಿ ಪುವಿತಾ ಎಸ್
Published on
ರಾಯಚೂರು
ಭಾರತೀಯ ಹವಾಮಾನ ಇಲಾಖೆಯ ವರದಿಯ ಪ್ರಕಾರ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಅವಶ್ಯಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಪೂವಿತಾ ಸಲಹೆ ನೀಡಿದ್ದಾರೆ.

ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದ್ದು, ಬಿಸಿ ಗಾಳಿ ಎಚ್ಚರಿಕೆ ನೀಡಲಾಗಿದೆ. ಹೀಟ್ ವೇವ್ ಸ್ಟ್ರೋಕ್‌ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡ ಸಲಹೆಗಳನ್ನು ನೀಡಿದೆ.
ಸಾರ್ವಜನಿಕರು ರೇಡಿಯೋ, ಟಿವಿ, ದಿನ ಪತ್ರಿಕೆಗಳಲ್ಲಿ ಬಿಸಿಲಿನ ತಾಪಮಾನದ ಕುರಿತು ಮುನ್ಸೂಚನೆಗಳನ್ನು ಪಡೆದುಕೊಳ್ಳಬೇಕು. ಬಾಯಾರಿಕೆಯಿಲ್ಲದಿದ್ದರೂ ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯಬೇಕು. ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸುವುದು, ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು. ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಟೋಪಿ, ಬೂಟುಗಳು ಅಥವಾ ಚಪ್ಪಲಗಳನ್ನು ಬಳಸಬೇಕು.

ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಉತ್ತಮ, ಒಂದು ವೇಳೆ ಪ್ರಯಾಣ ಮಾಡುವ ಸಂದರ್ಭ ಬಂದರೆ ಪ್ರಯಾಣ ಮಾಡುವಾಗ ನಿಮ್ಮೊಂದಿಗೆ ನೀರನ್ನು ತೆಗೆದುಕೊಂಡು ಹೋಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net