ಹಾಸ್ಟೆಲ್ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಿಸಿ

ಗಬ್ಬೂರಿನ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ಹಾಸ್ಟೆಲ್‌ಗೆ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಎಸ್.ನಕುಲ್, ಡಿಸಿ ಪೂವಿತಾ ಎಸ್. ಜಿಪಂ ಸಿಇಒ ಈಶ್ವರಕುಮಾರ ಕಾಂದೂ ವಿದ್ಯಾರ್ಥಿಗಳಿಂದ ಸಮಸ್ಯೆಗಳ ಮಾಹಿತಿ ಪಡೆದರು.
ಗಬ್ಬೂರಿನ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ಹಾಸ್ಟೆಲ್‌ಗೆ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಎಸ್.ನಕುಲ್, ಡಿಸಿ ಪೂವಿತಾ ಎಸ್. ಜಿಪಂ ಸಿಇಒ ಈಶ್ವರಕುಮಾರ ಕಾಂದೂ ವಿದ್ಯಾರ್ಥಿಗಳಿಂದ ಸಮಸ್ಯೆಗಳ ಮಾಹಿತಿ ಪಡೆದರು.
Published on
ದೇವದುರ್ಗ: ಗಬ್ಬೂರಿನ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ಹಾಸ್ಟೆಲ್ ಕಟ್ಟಡದ ಬಗ್ಗೆ ಪರಿಶೀಲನೆ ನಡೆಸಿ ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಎಸ್.ನಕುಲ್ ಸೂಚಿಸಿದರು.
ಗಬ್ಬೂರಿನ ಅಂಬೇಡ್ಕರ್ ಹಾಸ್ಟೆಲ್ ಛಾವಣಿ ಕಾಂಕ್ರೀಟ್ ಬಿದ್ದು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಹಿನ್ನೆಲೆಯಲ್ಲಿ ಹಾಸ್ಟೆಲ್‌ಗೆ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಛಾವಣಿ ಕಾಂಕ್ರೀಟ್ ಉದುರಿ ವಿದ್ಯಾರ್ಥಿಗಳು ಗಾಯಗೊಂಡಿರುವುದು ಗಂಭೀರ ವಿಚಾರವಾಗಿದ್ದು, ಈ ಬಗ್ಗೆ ವರದಿ ನೀಡಬೇಕು. ತಕ್ಷಣವೇ ವಸತಿನಿಲಯವನ್ನು ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಸುರಕ್ಷತೆಯೇ ಮುಖ್ಯವಾಗಿದ್ದು, ಹೊಸ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಪತ್ರಬರೆಯುವಂತೆ ಸೂಚಿಸಿದರು.
ಹೋರಾಟಗಾರ ರಾಜಪ್ಪ ಸಿರವಾರಕರ್ ಮಾತನಾಡಿ, ಗಬ್ಬೂರು ಹೋಬಳಿ 40 ಹಳ್ಳಿಗಳ ವ್ಯಾಪ್ತಿ ಹೊಂದಿದ್ದು, ಬಡವರು, ದಲಿತರ ಮಕ್ಕಳಿಗೆ ಇದು ಒಂದೇ ಹಾಸ್ಟೆಲ್ ಇದೆ. ಕಟ್ಟಡ ಬಹುತೇಕ ಶಿಥಿಲಾವಸ್ಥೆಯಲ್ಲಿದೆ. ತಕ್ಷಣವೇ ಹಾಸ್ಟೆಲನ್ನು ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಿಸಬೇಕು. ಈ ಮೂಲಕ ವಿದ್ಯಾರ್ಥಿಗಳ ಸುರಕ್ಷತೆ, ಭದ್ರತೆಗೆ ಆದ್ಯತೆ ನೀಡಬೇಕು. ಅರ್ಜಿ ಸಲ್ಲಿಸುವ ಎಲ್ಲ ವಿದ್ಯಾರ್ಥಿಗಳಿಗೂ ವಸತಿನಿಲಯದಲಲಿ ಅವಕಾಶ ಕಲ್ಪಿಸಬೇಕು. ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ನಂತರ ಅಧಿಕಾರಿಗಳ ತಂಡ ಕಟ್ಟಡ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳ ಸಮಸ್ಯೆ ಕೇಳಿದರು. ಭಯಪಡದೆ ವಿದ್ಯಾಭ್ಯಾಸದ ಕಡೆ ಗಮನಹರಿಸುವಂತೆ ಸಲಹೆ ನೀಡಿದರು. ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಪಂ ಸಿಇಒ ಈಶ್ವರ ಕುಮಾರ ಕಾಂದೂ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೃಷ್ಣ ಶಾವಂತಗೇರಾ, ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ, ಇಒ ರಾಜೇಂದ್ರಕುಮಾರ, ಸಮಾಜ ಕಲ್ಯಾಣಾಧಿಕಾರಿ ರಾಜ್‌ಕುಮಾರ ಡೋಣಿ, ಮುತ್ತುರಾಜ ಮ್ಯಾತ್ರಿ, ಬಸವರಾಜ ಜಗ್ಲಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net