ದೇವದುರ್ಗ: ತಾಲೂಕಿನ ಜಾಲಹಳ್ಳಿ ಹೋಬಳಿಯ ವಂದಲಿ ಗ್ರಾಮದಲ್ಲಿ ಮನೆಯ ಬೀಗ ಮುರಿದ ಕಳ್ಳತನ ಮಾಡಲಾಗಿದೆ.
ಅಲಾಮ್ ಖಾನ್ ಅವರ ಮನೆಯಲ್ಲಿ 10ಗ್ರಾಂ ಚಿನ್ನ, 50ಸಾವಿರ ರೂ. ನಗದು ಕಳ್ಳತನ ಮಾಡಲಾಗಿದೆ. ಸಂಬಂಧಿಕರು ಅನಾರೋಗ್ಯದಿಂದ ರಾಯಚೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ವಿಚಾರಿಸಲು ಅಲಾಮ್ ಖಾನ್ರಾಯಚೂರಿಗೆ ಹೋಗಿದ್ದರು. ಆ ಸಮಯದಲ್ಲಿ ಕಳ್ಳತನ ನಡೆದಿದೆ.
ಸ್ಥಳಕ್ಕೆ ಜಾಲಹಳ್ಳಿ ಠಾಣೆ ಪಿಎಸ್‌ಐ ವೈಶಾಲಿ ಝಳಕಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.