ಕುಡಿವ ನೀರಿನ ಸಮಸ್ಯೆಯಾದರೆ ನೀವೇ ಹೊಣೆ

ಮಾನ್ವಿಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಮಾನ್ವಿ ಮತ್ತು ಸಿರವಾರ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.
ಮಾನ್ವಿಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಮಾನ್ವಿ ಮತ್ತು ಸಿರವಾರ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ಸಚಿವ ಎನ್.ಎಸ್. ಬೋಸರಾಜು ಎಚ್ಚರಿಕೆ
  • ಮಾನ್ವಿಯಲ್ಲಿ ಸಭೆ
ಮಾನ್ವಿ: ಬೇಸಿಗೆಯಲ್ಲಿ ಕುಡಿವ ನೀರಿನ ಸಮಸ್ಯೆಯಾಗದಿರಲು ತುಂಗಭದ್ರಾ ಕಾಲುವೆಗೆಳಿಗೆ ನೀರು ಹರಿಸಲಾಗುತ್ತಿದೆ. ಅಧಿಕಾರಿಗಳು ಪಟ್ಟಣ ಹಾಗೂ ಹಳ್ಳಿಗಳಲ್ಲಿರುವ ಕುಡಿವ ನೀರಿನ ಕೆರೆಗಳನ್ನು ಭರ್ತಿ ಮಾಡಿಕೊಳ್ಳಬೇಕು ಎಂದು ಸಣ್ಣ ನೀರಾವರಿ ಎನ್.ಎಸ್. ಬೋಸರಾಜು ಸೂಚನೆ ನೀಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಮಾನ್ವಿ ಮತ್ತು ಸಿರವಾರ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ತುಂಗಭದ್ರಾ ಎಡದಂಡೆ ಕಾಲುವೆಗೆ ನೀರು ಹರಿಸಲಾಗುತ್ತಿದೆ. ಕಾಲುವೆ ನೀರನ್ನು ಅಕ್ರಮವಾಗಿ ಬಳಸಿಕೊಳ್ಳದಂತೆ ಕೆರೆಗಳಿಗೆ ತಲುಪಲು ಮಾನ್ವಿ ಪಿ.ಐ. ಸೋಮಶೇಖರ ಎಸ್.ಕೆಂಚರೆಡ್ಡಿ ಹಾಗೂ ಕವಿತಾಳ, ಸಿರವಾರ ಠಾಣೆಯ ಪೊಲೀಸ್ ಅಧಿಕಾರಿಗಳು ಅಗತ್ಯ ಭದ್ರತೆ ನೀಡಬೇಕು ಎಂದರು. 
ಕಾಲುವೆ ನೀರನ್ನು ಬಳಸಿಕೊಂಡು ಮಾನ್ವಿ ಮತ್ತು ಸಿರವಾರ ತಾಲೂಕಿನಲ್ಲಿ ಕೆರೆಗಳನ್ನು ತುಂಬಿಸಿಕೊಳ್ಳಲು ತಹಸೀಲ್ದಾರರು, ತಾಪಂ ಇಒಗಳು, ಪಿಡಿಒಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಕುಡಿವ ನೀರಿನ ತೊಂದರೆ ಕಂಡುಬಂದಲ್ಲಿ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಸಿದರು. 
ಶಾಸಕ ಜಿ.ಹಂಪಯ್ಯ ನಾಯಕ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕುಡಿವ ನೀರಿನ ತೊಂದರೆಯಾಗದಂತೆ ಕೊಳವೆ ಬಾವಿಗಳನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ನೀರಿಲ್ಲದ ಕೊಳವೆ ಬಾವಿಗಳಿಗೆ ಫ್ಲಾಶಿಂಗ್ ಮಾಡಿಸಲು ಕ್ರಮ ಕೈಗೊಳ್ಳಬೇಕು. ಬೋರ್‌ವೆಲ್ ಮೋಟರ್ ಯಂತ್ರಗಳ ದುರಸ್ತಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು. 
ನಯೋಪ್ರಾ ಅಧ್ಯಕ್ಷ ಅಬ್ದುಲ್ ಗಫೂರಸಾಬ್, ಪಂಚ ಗ್ಯಾರಂಟಿಗಳ ಸಮಿತಿ ತಾಲೂಕು ಅಧ್ಯಕ್ಷ ಬಿ.ಕೆ .ಅಂಬರೀಷಪ್ಪ ವಕೀಲ, ತಹಸೀಲ್ದಾರ್ ಭೀಮರಾಯ ಬಿ.ರಾಮಸಮುದ್ರ, ತಾಪಂ ಇಒ ಖಾಲಿದ್ ಅಹ್ಮದ್, ಪುರಸಭೆ ಮುಖ್ಯಾಧಿಕಾರಿ ಪರಶುರಾಮ ದೇವಮಾನೆ, ಪಿಐ ಸೋಮಶೇಖರ ಕೆಂಚರೆಡ್ಡಿ, ಮಾನ್ವಿ ಮತ್ತು ಸಿರವಾರ ತಾಲೂಕು ಮಟ್ಟದ ಅಧಿಕಾರಿಗಳು, ಪುರಸಭೆ ಸಿಬ್ಬಂದಿ ಇದ್ದರು.  
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net