ಬೆಂಬಲ ಬೆಲೆ ಕಾಯ್ದೆ ಶಾಸನಬದ್ಧವಾಗಿ ಜಾರಿಗೊಳಿಸಿ

ಸಿಂಧನೂರಿನ ಎಪಿಎಂಸಿಯ ಪ್ರಾಂಗಣದಲ್ಲಿ ವಿಶ್ವ ರೈತ ದಿನಾಚರಣೆ ನಿಮಿತ್ತ ತುಂಗಭದ್ರಾ ರಕ್ಷಣೆ ನಮ್ಮೆಲ್ಲರ ಹೊಣೆ ಜಾಗೃತಿ ಕಾರ್ಯಕ್ರಮ ಮತ್ತು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ, 3ಮೈಲ್‌ಕ್ಯಾಂಪ್ ರಂಭಾಪುರಿ ಖಾಸಾಶಾಖಾ ಮಠದ ಸೋಮನಾಥ ಶಿವಾಚಾರ್ಯರು, ವೆಂಕಟಗಿರಿಕ್ಯಾಂಪಿನ ಸಿದ್ದಾಶ್ರಮದ ಸದಾನಂದ ಶರಣರು, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷಹನುಮನಗೌಡ ಬೆಳಗುರ್ಕಿ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಶಾಸನಬದ್ಧ
  • ಬೆಂಬಲ ಬೆಲೆ ಕಾಯ್ದೆ
  • ಜಾರಿಗೊಳಿಸಿ

ಬೆಂಬಲ ಬೆಲೆ ಕಾಯ್ದೆ ಶಾಸನಬದ್ಧವಾಗಿ ಜಾರಿಗೊಳಿಸಿ

ಸಿಂಧನೂರು: ರೈತರು ಬೆಳೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾಯ್ದೆಯನ್ನು ಶಾಸನಬದ್ಧವಾಗಿ ಜಾರಿಗೊಳಿಸಬೇಕು. ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದರು.
ನಗರದ ಎಪಿಎಂಸಿಯ ಪ್ರಾಂಗಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಗೂ ಜೈ ಜವಾನ್ ಜೈ ಕಿಸಾನ್ ಜನಸೇವಾ ಸಂಘ ತಾಲೂಕು ಘಟಕದ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ರೈತ ದಿನಾಚರಣೆ ನಿಮಿತ್ತ ತುಂಗಭದ್ರಾ ರಕ್ಷಣೆ ನಮ್ಮೆಲ್ಲರ ಹೊಣೆ ಜಾಗೃತಿ ಕಾರ್ಯಕ್ರಮ ಮತ್ತು ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ತುಂಗಭದ್ರಾ ಜಲಾಶಯದ ನೀರನ್ನು ಮೂರು ರಾಜ್ಯಗಳು ಬಳಸುತ್ತಿವೆ. ವಿಶೇಷವಾಗಿ ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲೆ ್ಲಗಳ ಜೀವನಾಡಿಯಾಗಿದೆ. ಆದರೆ, ಡ್ಯಾಂನಲ್ಲಿ 30 ಟಿಎಂಸಿಗೂ ಅಧಿಕ ಹೂಳು ತುಂಬಿದ್ದು, ಪ್ರತಿ ವರ್ಷ ನೀರಿನ ಸಮಸ್ಯೆಯಾಗುತ್ತಿದೆ.
ಜಲಾಶಯದ ಕ್ರಸ್ಟ್ ಗೇಟ್‌ಗಳನ್ನು ಅಳವಡಿಸುವ ಜತೆಗೆ ಅಕ್ವಡೆಕ್ಟ್, ಬ್ರಿಡ್ಜ್ ನಿರ್ಮಿಸಲು ಸರ್ಕಾರ ಮುಂದಾಗಿದೆ. ಆದರೆ, ಹಳೇ ತೂಬ್‌ಗಳಿಗೆ ಚೈನ್ ಹಾಕುತ್ತಿರುವುದು ಸರಿಯಲ್ಲ. ಇದರಿಂದ ನೀರಿನ ಹಂಚಿಕೆಯಲ್ಲಿ ವ್ಯತ್ಯಾಸವಾಗಲಿದ್ದು, ಈ ಬಗ್ಗೆ ತಜ್ಞರ ಸಲಹೆ ಪಡೆಯಬೇಕು ಎಂದು ಒತ್ತಾಯಿಸಿದರು.
ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ಕೈಗಾರಿಕೆಯ ವಸ್ತುಗಳಿಗೆ ಬೆಲೆ ನಿಗದಿಪಡಿಸಿ ಮಾರಾಟ ಮಾಡಲಾಗುತ್ತಿದೆ. ಆದರೆ, ರೈತರು ಬೆಳೆಗಳಿಗೆ ಎಂಎಸ್‌ಪಿ ನೀಡದಿರುವುದು ಎಷ್ಟು ಸರಿ. ರೈತರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಯಾವ ಸರ್ಕಾರವೂ ಇಚ್ಛಾಶಕ್ತಿ ವಹಿಸಿಲ್ಲ ಎಂದರು.
3ಮೈಲ್‌ಕ್ಯಾಂಪ್ ರಂಭಾಪುರಿ ಖಾಸಾಶಾಖಾ ಮಠದ ಸೋಮನಾಥ ಶಿವಾಚಾರ್ಯರು, ವೆಂಕಟಗಿರಿಕ್ಯಾಂಪಿನ ಸಿದ್ದಾಶ್ರಮದ ಸದಾನಂದ ಶರಣರು, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷಹನುಮನಗೌಡ ಬೆಳಗುರ್ಕಿ, ರೈತ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಸವರಾಜ ಗೋಡಿಹಾಳ, ಜೈ ಜವಾನ್ ಜೈ ಕಿಸಾನ್ ಕಕ ಅಧ್ಯಕ್ಷ ಮಲ್ಲಿಕಾರ್ಜುನ ರಡ್ಡಿ, ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ಪ್ರಮುಖರಾದ ರಾಜೇಶ ಹಿರೇಮಠ, ತಿಮ್ಮಣ್ಣ ಸಾಹುಕಾರ, ಸರ್ವೋತ್ತಮರಡ್ಡಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net