ನಗರದ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ಪಬ್ಲಿಕ್ ಶಾಲೆಗಳ ಅಭಿವೃದ್ಧಿ ಕುರಿತ ಮುಖ್ಯಶಿಕ್ಷಕರು, ಪ್ರಾಚಾರ್ಯರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಗುರುವಾರ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ಮಕ್ಕಳಲ್ಲಿ ಕಲಿಕಾಸಕ್ತಿ ಹೆಚ್ಚಿಸಬೇಕು. ಶಾಲೆಯಲ್ಲಿ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಿಸುವುದು, ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಶಿಕ್ಷಕರು ಕೆಲಸ ಮಾಡಬೇಕು ಎಂದರು.