

ಅರಕೇರಾ: ಸಿರವಾರ ತಾಲೂಕಿನ ಹೊಕ್ರಾಣಿಯಲ್ಲಿ ಯುವತಿ ಹಾಗೂ ಲಿಂಗಸುಗೂರು ತಾಲೂಕಿನ ಕರಡಕಲ್ ಗ್ರಾಮದಲ್ಲಿ ಮಹಿಳೆ ಅನುಮಾನಾಸ್ಪದ ಸಾವಿನ ಪ್ರಕರಣಗಳ ನಿಷ್ಪಕ್ಷಪಾತ ತನಿಕೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಂಡು ಸಂತ್ರಸ್ತ ಕುಟುಂಬಸ್ಥರಿಗೆ ನ್ಯಾಯ ಒದಗಿಸಬೇಕು ಎಂದು ಛಲವಾದಿ ಮಹಾಸಭಾ ತಾಲೂಕು ಘಟಕದ ಪದಾಧಿಕಾರಿಗಳು ಒತ್ತಾಯಿಸಿದರು.