ಸ್ವ-ಉದ್ಯೋಗದಿಂದ ಆರ್ಥಿಕಬಲ ಹೆಚ್ಚಿಸಿಕೊಳ್ಳಿ

ಆನೆಹೊಸೂರಿನಲ್ಲಿ ಆಯೋಜಿಸಿದ್ದ ಸಾಮೂಹಿಕ ಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆಯನ್ನು ಅಂಕಲಿಮಠದ ಫಕೀರೇಶ್ವರ ಸ್ವಾಮೀಜಿ ಉದ್ಘಾಟಿಸಿದರು. ಎಸ್‌ಕೆಡಿಆರ್‌ಡಿಪಿ ಜಿಲ್ಲಾ ನಿರ್ದೇಶಕ ರಾಘವೇಂದ್ರ ಪಟಗಾರ, ಜಿಪಂ ಮಾಜಿ ಸದಸ್ಯ ಜೀವಲಪ್ಪ ನಾಯಕ, ತಾಪಂ ಮಾಜಿ ಉಪಾಧ್ಯಕ್ಷ ಡಿ.ಜಿ.ಗುರಿಕಾರ, ರೈತ ಸಂಘದ ತಾಲೂಕು ಅಧ್ಯಕ್ಷ ರಾಮಣ್ಣ ನಾಯಕ ಇತರರಿದ್ದರು.
ಆನೆಹೊಸೂರಿನಲ್ಲಿ ಆಯೋಜಿಸಿದ್ದ ಸಾಮೂಹಿಕ ಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆಯನ್ನು ಅಂಕಲಿಮಠದ ಫಕೀರೇಶ್ವರ ಸ್ವಾಮೀಜಿ ಉದ್ಘಾಟಿಸಿದರು. ಎಸ್‌ಕೆಡಿಆರ್‌ಡಿಪಿ ಜಿಲ್ಲಾ ನಿರ್ದೇಶಕ ರಾಘವೇಂದ್ರ ಪಟಗಾರ, ಜಿಪಂ ಮಾಜಿ ಸದಸ್ಯ ಜೀವಲಪ್ಪ ನಾಯಕ, ತಾಪಂ ಮಾಜಿ ಉಪಾಧ್ಯಕ್ಷ ಡಿ.ಜಿ.ಗುರಿಕಾರ, ರೈತ ಸಂಘದ ತಾಲೂಕು ಅಧ್ಯಕ್ಷ ರಾಮಣ್ಣ ನಾಯಕ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಎಸ್‌ಕೆಡಿಆರ್‌ಡಿಪಿ ಜಿಲ್ಲಾ ನಿರ್ದೇಶಕ ರಾಘವೇಂದ್ರ ಸಲಹೆ
  • ಲಿಂಗಸುಗೂರು ಆನೆಹೊಸೂರು ಮಹಾಲಕ್ಷ್ಮೀ ಪೂಜಾ
ಲಿಂಗಸುಗೂರು: ಗ್ರಾಮೀಣ ಪ್ರದೇಶಗಳಲ್ಲಿ ಸ್ವಸಹಾಯ ಸಂಘಗಳ ಮಹಿಳೆಯರು, ಕಾರ್ಮಿಕರ ಕುಟುಂಬದವರು ಕಡಿಮೆ ಬಡ್ಡಿ ದರದಲ್ಲಿ ದೊರೆಯುವ ಪ್ರಗತಿ ನಿಧಿ ಸದುಪಯೋಗಪಡಿಸಿಕೊಂಡು ಸ್ವ-ಉದ್ಯೋಗ ಕೈಗೊಂಡು ಆರ್ಥಿಕ ಬಲ ಹೆಚ್ಚಿಸಿಕೊಳ್ಳಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ರಾಘವೇಂದ್ರ ಪಟಗಾರ ಹೇಳಿದರು.
ತಾಲೂಕಿನ ಆನೆಹೊಸೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಹಾಲಕ್ಷ್ಮೀ ಪೂಜಾ ಸಮಿತಿ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಸಾಮೂಹಿಕ ಶ್ರೀ ಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.
ಸ್ವಸಹಾಯ ಸಂಘದ ಸದಸ್ಯರ ಮಕ್ಕಳಿಗೆ ಸುಜ್ಞಾನ ಶಿಷ್ಯವೇತನ, ಕುಡಿವ ನೀರಿನ ಕೆರೆಗಳ ಹೂಳೆತ್ತುವುದು, ನಿರ್ಗತಿಕರಿಗೆ ಮಾಸಾಶನ, ಸರ್ಕಾರಿ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರನ್ನು ನೀಡಲಾಗುತ್ತಿದೆ ಎಂದರು.
ತಾಪಂ ಮಾಜಿ ಉಪಾಧ್ಯಕ್ಷ ಡಿ.ಜಿ.ಗುರಿಕಾರ ಮಾತನಾಡಿ, ಧರ್ಮಸ್ಥಳ ಸಂಸ್ಥೆಯು ಸರ್ಕಾರ ಮಾಡುವ ಕೆಲಸ ಮಾಡುತ್ತಿದೆ. ಮಹಿಳೆಯರು ಸಂಸ್ಥೆಯ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಸಂಘದ ಸದಸ್ಯರಿಗೆ ಲಾಭಾಂಶದ ಚೆಕ್, ಆರೋಗ್ಯ ರಕ್ಷಾ ಚೆಕ್ ವಿತರಿಸಲಾಯಿತು. ಸುಕ್ಷೇತ್ರ ಅಂಕಲಿಮಠದ ಫಕೀರೇಶ್ವರ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಮುಖರಾದ ಡಾ.ಭೀಮಸೇನರಾವ್ ಕುಲಕರ್ಣಿ, ತಿಮ್ಮನಗೌಡ ಪೊಲೀಸ್ ಪಾಟೀಲ್, ಅಡಿವೆಯ್ಯ ಸ್ವಾಮಿ, ಗ್ಯಾನಪ್ಪ ಕಟ್ಟಿಮನಿ, ಮಹ್ಮದ್ ಅಲಿ ನಾಗಡದಿನ್ನಿ, ಪವಿತ್ರಾ ಶಿವಗೇನಿ, ಅನುರಾಧಾ ಜೂಲಗುಡ್ಡ, ರಾಜಾಸಾಬ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net