ಮಹಿಳೆಯರಲ್ಲಿ ಸ್ವಾವಲಂಬನೆ ಮನೋಭಾವನೆ ವೃದ್ಧಿ

ದೇವದುರ್ಗದಲ್ಲಿ ಆಯೋಜಿಸಿದ್ದ  ಸರ್ವಶಕ್ತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಯೋಜನೆ ಪ್ರಾದೇಶಿಕ ನಿರ್ದೇಶಕ ಜೆ.ಚಂದ್ರಶೇಖರ ಉದ್ಘಾಟಿಸಿದರು.
ದೇವದುರ್ಗದಲ್ಲಿ ಆಯೋಜಿಸಿದ್ದ ಸರ್ವಶಕ್ತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಯೋಜನೆ ಪ್ರಾದೇಶಿಕ ನಿರ್ದೇಶಕ ಜೆ.ಚಂದ್ರಶೇಖರ ಉದ್ಘಾಟಿಸಿದರು.
Published on

ದೇವದುರ್ಗ: ಮಹಿಳೆಯರ ಸಬಲೀಕರಣ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಗುರಿಯಾಗಿದೆ. ಇದಕ್ಕಾಗಿ ವಿವಿಧ ಯೋಜನೆಗಳನ್ನು ರೂಪಿಸಲಾಗಿದ್ದು, ಮಹಿಳೆಯರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಯೋಜನೆಯ ಪ್ರಾದೇಶಿಕ ನಿರ್ದೇಶಕ ಜೆ.ಚಂದ್ರಶೇಖರ ಹೇಳಿದರು.

ಸರ್ವಶಕ್ತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಹಾಗೂ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಭಾನುವಾರ ಮಾತನಾಡಿದರು. ಜ್ಞಾನವಿಕಾಸ ಯೋಜನೆಯಿಂದ ಮಹಿಳೆಯರಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ, ಸಾಮಾಜಿಕ ಜಾಗೃತಿ ಹಾಗೂ ಸ್ವಾವಲಂಬನೆ ಮನೋಭಾವ ವೃದ್ಧಿಯಾಗುತ್ತಿದೆ. ಕುಟುಂಬ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಯೋಜನೆಗಳು ಸಹಕಾರಿಯಾಗಿವೆ. ಮಹಿಳೆಯರು ಆರೋಗ್ಯದ ಕಡೆ ವಿಶೇಷ ಗಮನ ಕೊಡಬೇಕು. ನೀವು ಆರೋಗ್ಯವಾಗಿದ್ದರೆ ಕುಟುಂಬ ಕ್ಷೇಮವಾಗಿರಲಿದೆ. ಆರ್ಥಿಕ ಶಿಸ್ತು ಕೂಡ ಕುಟುಂಬದ ನೆಮ್ಮದಿಗೆ ಕಾರಣವಾಗಲಿದೆ ಎಂದರು.
ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಸತೀಶ್ ಬಳೆ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ಹಲವು ಜನೋಪಯೋಗಿ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದೆ. ಮಹಿಳೆಯರು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಮಾಹಿತಿ ಹಾಗೂ ಕೌಶಲ ಪಡೆದುಕೊಂಡು ಕುಟುಂಬದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಶ್ರಮಿಸಬೇಕು. ಪ್ರತಿಯೊಬ್ಬರೂ ಯೋಜನೆ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net