ಸಿರವಾರ: ಓರಿಸ್ಸಾ ಕ್ಯಾಂಪಿನಲ್ಲಿ ಸವದತ್ತಿ ಯಲ್ಲಮ್ಮದೇವಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮ ಮಂಗಳವಾರ ಅದ್ದೂರಿಯಾಗಿ ಜರುಗಿತು.
ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಮಾಡಿ ಮಾತನಾಡಿದ ನೀಲೋಗಲ್ ಬೃಹನ್ಮಠದ ಡಾ.ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ, ಗ್ರಾಮಗಳಲ್ಲಿ ದೇವಿ ವಿಗ್ರಹ ಪ್ರತಿಷ್ಠಾಪನೆಯಿಂದ ಒಳ್ಳೆಯದಾಗಲಿದೆ. ಗ್ರಾಮಸ್ಥರ ಮೇಲೆ ದೇವಿ ಆಶೀರ್ವಾದ ಇರಲಿದೆ ಎಂದು ಹೇಳಿದರು.
ವಿವಿಧ ಧಾರ್ಮಿಕ ಕಾರ್ಯಗಳು ನಡೆದವು. ನವಲಕಲ್ ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯ ಸ್ವಾಮೀಜಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.