ಮುದಗಲ್: ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ ಕೊಠಡಿ, ಶಿಕ್ಷಕರ ಹುದ್ದೆ ಭರ್ತಿ ಹಾಗೂ ಮೂಲ ಸೌಕರ್ಯ ಒದಗಿಸುವ ಮೂಲಕ ಶಿಕ್ಷಣಕ್ಕೆ ಆದ್ಯತೆ ನೀಡಲಾಗುವುದು ಎಂದು ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಪುರ ಹೇಳಿದರು.
ಆಮದಿಹಾಳ ಗ್ರಾಮದ ಸರ್ಕಾರಿ ಹಿಪ್ರಾ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, 2025-2026 ಸಾಲಿನ ಡಿಎಂಎಫ್ ಯೋಜನೆಯಡಿ ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಮದಿಹಾಳ ಗ್ರಾಮದ ಸರ್ಕಾರಿ ಶಾಲೆ, ಬಯ್ಯಪುರದ ಸರ್ಕಾರಿ ಪ್ರೌಢಶಾಲೆ, ಸಜ್ಜಲಗುಡ್ಡ ಗ್ರಾಮದ ಸರ್ಕಾರಿ ಪ್ರೌಢಶಾಲೆ, ರಾಂಪುರ, ಹನುಮಗುಡ್ಡ, ವ್ಯಾಕರನಾಳದ ಸರ್ಕಾರಿ ಕಿಪ್ರಾ ಶಾಲೆಯಲ್ಲಿ ತಲಾ ಒಂದು ಕೊಠಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಗುಣಮಟ್ಟದ ಕಾಮಗಾರಿ ನಿರ್ವಹಣೆ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.